ಕರ್ನಾಟಕ

karnataka

ETV Bharat / state

ಕೊನೆಗೂ ಎಚ್ಚೆತ್ತ ಕಾಂಗ್ರೆಸ್:​ ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಲು ಸೂಚನೆ - latest congrass news

ಡಿ.ಕೆ. ಶಿವಕುಮಾರ ಅವರು ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಬಳಿಕ ಜಿಲ್ಲಾ ಮಟ್ಟದ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗುತ್ತಿದ್ದಾರೆ. ರಾಜ್ಯ ಸರ್ಕಾರ ಘೋಷಣೆ ಮಾಡಿದ ಬಡವರಿಗೆ, ನೇಕಾರರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಟ್ಯಾಕ್ಷಿ, ಅಟೋ ಚಾಲಕರಿಗೆ ನೀಡಿರುವ ಪರಿಹಾರ ಧನ ಹೆಚ್ಚು ಮಾಡುವಂತೆ ಫೇಸ್​​ಬುಕ್​ನಲ್ಲಿ ವಿಡಿಯೋ ಮಾಡಿ ಹರಿಬಿಡುವ ಮೂಲಕ ಪಕ್ಷದ ವರ್ಚಸ್ಸು ಹಾಗೂ ಸರ್ಕಾರದ ಯೋಜನೆಯನ್ನು ಸಮರ್ಪಕವಾಗುತ್ತಿಲ್ಲ ಎಂದು ಜಾಗೃತಿ ಮೂಡಿಸುವ ಜೊತೆಗೆ ಪಕ್ಷದ ಸಂಘಟನೆ ಮಾಡುತ್ತಿದ್ದಾರೆ.

congress
ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಲು ಸೂಚನೆ

By

Published : May 29, 2020, 10:27 PM IST

ಬಾಗಲಕೋಟೆ :ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಹಿರಿಯರ ಸದಸ್ಯರು ಹಾಗೂ ಪದಾಧಿಕಾರಿಗಳು ಸೇರಿದಂತೆ ಇತರೆ ಜನಪ್ರತಿನಿಧಿಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ಡಿ.ಕೆ. ಶಿವಕುಮಾರ ಅವರು ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಬಳಿಕ ಜಿಲ್ಲಾ ಮಟ್ಟದ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗುತ್ತಿದ್ದಾರೆ. ರಾಜ್ಯ ಸರ್ಕಾರ ಘೋಷಣೆ ಮಾಡಿದ ಬಡವರಿಗೆ, ನೇಕಾರರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಟ್ಯಾಕ್ಷಿ,ಅಟೋ ಚಾಲಕರಿಗೆ ನೀಡಿರುವ ಪರಿಹಾರ ಧನ ಹೆಚ್ಚು ಮಾಡುವಂತೆ ಫೇಸ್ ಬುಕ್​ನಲ್ಲಿ ವಿಡಿಯೋ ಹರಿ ಬಿಡುವ ಮೂಲಕ ಪಕ್ಷದ ವರ್ಚಸ್ಸು ಹಾಗೂ ಸರ್ಕಾರದ ಯೋಜನೆಯನ್ನು ಸಮರ್ಪಕವಾಗುತ್ತಿಲ್ಲ ಎಂದು ಜಾಗೃತಿ ಮೂಡಿಸುವ ಜೊತೆಗೆ ಪಕ್ಷದ ಸಂಘಟನೆಯನ್ನು ಮಾಡುತ್ತಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಜೂ. 7 ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷರ ಹಾಗೂ ಕಾರ್ಯಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಹಿನ್ನೆಲೆ ನಗರಕ್ಕೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಸಂಘಟನೆ ಜೊತೆಗೆ ಸಾಮಾಜಿಕ ಜಾಲತಾಣ ಬಳಕೆ ಬಗ್ಗೆ ಚರ್ಚೆ ನಡೆಸಿದ್ದರು. ಪದಗ್ರಹಣ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಿ ಎಲ್ಲಾ ಕಾರ್ಯಕರ್ತರಿಗೆ ಮುಟ್ಟಿಸುವ ಕೆಲಸ ನಡೆಸಲು ನಿರ್ಧಾರ ಮಾಡಲಾಗಿದೆ.

ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಲು ಸೂಚನೆ

ಈ ಹಿನ್ನೆಲೆ ಕೆಪಿಸಿಸಿಯಿಂದ ಮುಖಂಡರಿಂದ ಸಂದೇಶ ಬಂದಿದ್ದು, ಎಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗುವಂತೆ ಸೂಚಿಸಲಾಗಿದೆ. ಹಾಗಾಗಿ ವಿಧಾನ ಪರಿಷತ್ ಸದಸ್ಯ ಎಸ್. ಆರ್. ಪಾಟೀಲ್, ಮಾಜಿ ಶಾಸಕ ಜೆ.ಟಿ.ಪಾಟೀಲ್, ಜಿ.ಪಂ.ಮಾಜಿ ಅಧ್ಯಕ್ಷ ವೀಣಾ ಕಾಶಪ್ಪನವರ ಸೇರಿದಂತೆ ಪದಾಧಿಕಾರಿಗಳು ಹಾಗೂ ಇತರ ಅಭಿಮಾನಿಗಳು ಸರ್ಕಾರದ ವಿರುದ್ದ ಅಭಿಯಾನ ನಡೆಸಿದ್ದರೆ.

ABOUT THE AUTHOR

...view details