ಬಾಗಲಕೋಟೆ: ಹುನಗುಂದದಲ್ಲಿ ಬಿಜೆಪಿ ಪಕ್ಷದ ಆಡಳಿತವನ್ನು ಖಂಡಿಸಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹುನಗುಂದ ಪಟ್ಟಣದ ಬಸವಭವನದಿಂದ ತಹಶೀಲ್ದಾರ್ ಕಚೇರಿಯವರೆಗೆ ಮೆರವಣಿಗೆ ನಡೆಯಿತು.
ಕಂಡಕ್ಟರ್ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಿ: ಮಾಜಿ ಶಾಸಕ ವಿಜಯಾನಂದ ಒತ್ತಾಯ - Yadiyurappa
ಹುನಗುಂದದಲ್ಲಿ ಬಿಜೆಪಿ ಪಕ್ಷದ ಆಡಳಿತವನ್ನು ಖಂಡಿಸಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, ಬಿಜೆಪಿ ಶಾಸಕ ದೊಡ್ಡಗೌಡ ಪಾಟೀಲ್ ವಿರುದ್ದ ಹರಿಹಾಯ್ದರು. ಇತ್ತೀಚೆಗೆ ಶಾಸಕರ ಬೆಂಬಲಿಗರಿಂದ ಕಂಡಕ್ಟರ್ ಮೇಲೆ ನಡೆಸಿದ ಹಲ್ಲೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಿಲ್ಲ. ಒಂದು ವಾರದೊಳಗೆ ಬಂಧನ ಮಾಡದಿದ್ದರೆ ಹುನಗುಂದ ಪಟ್ಟಣ ಬಂದ್ ಮಾಡಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದರು.
ಯಡಿಯೂರಪ್ಪನವರ ಸರ್ಕಾರದಲ್ಲಿ ಈಗಾಗಲೇ ತಾರತಮ್ಯ ಉಂಟಾಗಿದ್ದು, ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶಾಸಕ ದೊಡ್ಡಗೌಡ ಪಾಟೀಲ್ ಈ ಕ್ಷೇತ್ರದಲ್ಲಿ ಎರಡು ವರ್ಷ ಆಡಳಿತ ಅವಧಿಯಲ್ಲಿ ಎಷ್ಟು ಹಣ ತಂದಿದ್ದಾರೆ ಎಂದು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದರು.