ಬಾಗಲಕೋಟೆ:ನೆರೆ ಸಂತ್ರಸ್ತರಿಗೆ ಪರಿಹಾರ ಧನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಯುವ ಘಟಕದಿಂದ ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರದ ವಿರುದ್ಧ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ.. - ವಿನಯ್ ತಿಮ್ಮಾಪೂರ
ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಆರ್ ಬಿ ತಿಮ್ಮಾಪೂರ ಅವರ ಪುತ್ರ ವಿನಯ್ತಿಮ್ಮಾಪೂರ ನೇತೃತ್ವದಲ್ಲಿ ಇಂದು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೀತು.
ಮಾಜಿ ಸಚಿವ ಆರ್ ಬಿ ತಿಮ್ಮಾಪೂರ ಅವರ ಪುತ್ರ ವಿನಯ್ ತಿಮ್ಮಾಪೂರ ನೇತೃತ್ವದಲ್ಲಿ ಬಿಜೆಪಿ ಪಕ್ಷದ ಸರ್ಕಾರ ವಿರುದ್ದ ಘೋಷಣೆ ಹಾಕುತ್ತಾ ಪ್ರತಿಭಟನೆ ನಡೆಸಿದರು.ಇದೇ ವೇಳೆ ಮಾತನಾಡಿದ ವಿನಯ್, ಸರ್ಕಾರ ನೆರೆ ಸಂತ್ರಸ್ತರಿಗೆ ಮೊದಲು ಹಂತವಾಗಿ ಹತ್ತು ಸಾವಿರ ರೂ. ಪರಿಹಾರ ಧನ ನೀಡುವುದಾಗಿ ತಿಳಿಸಿತ್ತು. ಈವೆರೆಗೂ ಪರಿಹಾರ ಧನ ಬಂದಿಲ್ಲ. ಅಲ್ಲದೆ ಸಂಪೂರ್ಣ ಮನೆ ಬಿದ್ದವರಿಗೆ ಐದು ಲಕ್ಷ ಹಣ ನೀಡುವುದಾಗಿ ತಿಳಿಸಿದೆ. ಸರ್ಕಾರ ಈವರೆಗೂ ಯಾವುದೇ ಒಂದೇ ಒಂದು ಕುಟುಂಬಕ್ಕೆ ನೀಡಿಲ್ಲ ಎಂದು ಆರೋಪಿಸಿದರು. ಈ ವೇಳೆ ವಿವಿಧ ಬೇಡಿಕೆ ಇರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.