ಬಾಗಲಕೋಟೆ:ಜಿಲ್ಲೆಯಲ್ಲಿಂದು 42 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ 147 ಕೊರೊನಾ ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಬಾಗಲಕೋಟೆ:42 ಜನ ಗುಣಮುಖ, 147 ಹೊಸ ಪ್ರಕರಣಗಳು ದೃಢ - ಬಾಗಲಕೋಟೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ
ಬಾಗಲಕೋಟೆ ಜಿಲ್ಲೆಯಲ್ಲಿ ಹೊಸದಾಗಿ 147 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹಾಗೂ ಜಿಲ್ಲೆಯಲ್ಲಿ ಸದ್ಯ 1176 ಮಾತ್ರ ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 9821 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 8541 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಸೋಂಕು ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 15, ಬಾದಾಮಿ 23, ಹುನಗುಂದ 30, ಬೀಳಗಿ 8, ಮುಧೋಳ 40, ಜಮಖಂಡಿಯ 31 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷೆಗೆ ಕಳಿಸಿರುವ 1374 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 96109 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 84407 ನೆಗೆಟಿವ್ ಪ್ರಕರಣ, 9821 ಪಾಸಿಟಿವ್ ಪ್ರಕರಣ ಹಾಗೂ 104 ಮೃತ ಪ್ರಕರಣ ವರದಿಯಾಗಿವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ್ ಆಗಿವೆ. ಇನ್ನು 1176 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಕಂಟೈನ್ಮೆಂಟ್ ಝೋನ್ 722 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.