ಬಾಗಲಕೋಟೆ: ಜಿಲ್ಲೆಯಲ್ಲಿ ನಿನ್ನೆ ಮತ್ತೆ ನಾಲ್ಕು ಹೊಸ ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ.
ನವನಗರದ ಸೆಕ್ಟರ್ ನಂ.8ರ 33 ವರ್ಷದ ಮಹಿಳೆ ಪಿ-7546 (ಬಿಜಿಕೆ-108), ಮುಧೋಳ ನಗರದ 35 ವರ್ಷದ ಪುರುಷ ಪಿ-7547 (ಬಿಜಿಕೆ-109), ನವನಗರದ ಸೆಕ್ಟರ್ ನಂ.2ರ 16 ವರ್ಷದ ಬಾಲಕಿ ಪಿ-7548 (ಬಿಜಿಕೆ-110), 47 ವರ್ಷದ ಪುರುಷನಿಗೆ ಪಿ-7549 (ಬಿಜಿಕೆ-111) ಕೋವಿಡ್ ಸೋಂಕು ದೃಢಪಟ್ಟಿದೆ.
ಪಿ-7546, ಪಿ-7548, ಪಿ-7549 ಸೋಂಕು ದೃಢಪಟ್ಟವರು ಮಹಾರಾಷ್ಟ್ರ ರಾಜ್ಯದಿಂದ ಬಂದವರಾಗಿದ್ದು, ಪಿ-7547 ಸೋಂಕಿತ ವ್ಯಕ್ತಿಯು ಕೆಮ್ಮು, ನೆಗಡಿ ಮತ್ತು ಜ್ವರದ ಲಕ್ಷಣದಿಂದ ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ. ಸದರಿ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಗೆ ಶಿಪ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಿಂದ ಕಳುಹಿಸಲಾದ 187 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 570 ಜನರ ಮೇಲೆ ನಿಗಾವಹಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 9806 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 9460 ನೆಗಟಿವ್, 111 ಪಾಜಿಟಿವ್ ಪ್ರಕರಣ ಹಾಗೂ ಒಂದು ಮೃತ ಪ್ರಕರಣ ವರದಿಯಾಗಿರುತ್ತದೆ.
ಕೋವಿಡ್-19 ದಿಂದ ಒಟ್ಟು 91 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 19 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 13 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟಆಗಿರುತ್ತವೆ. 15 ದಿನಗಳ ಕಾಲ ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 3433 ಜನರನ್ನು ಬಿಡುಗಡೆ ಮಾಡಲಾಗಿದೆಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.