ಬಾಗಲಕೋಟೆ:ಕೋವಿಡ್ ನಿಯಮಗಳನ್ನು ಸರ್ಕಾರಿ ಅಧಿಕಾರಿಗಳೇ ಉಲ್ಲಂಘನೆ ಮಾಡಿರುವ ಘಟನೆ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ. ಕಂದಾಯ ದಿನಾಚರಣೆ ಅಂಗವಾಗಿ ಕಂದಾಯ ಮತ್ತು ಪೊಲೀಸ್ ಇಲಾಖೆ ಮಧ್ಯೆ ವಾಲಿಬಾಲ್ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವಿಡಿಯೋ ಇಲ್ಲಿದೆ.
ವಾಲಿಬಾಲ್ ಪಂದ್ಯಾವಳಿಯಲ್ಲಿ ಜಯ ಗಳಿಸಿದ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಉತ್ತರ ಕರ್ನಾಟಕ ಜಾನಪದ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದರು. ಕಂದಾಯ ಇಲಾಖೆಯ ಪರವಾಗಿ ಮುಧೋಳ ತಹಶೀಲ್ದಾರ್ ಎಸ್.ಎಸ್.ಇಂಗಳೆ, ಜಮಖಂಡಿಯ ತಹಶೀಲ್ದಾರ್ ಪ್ರಶಾಂತ ಚಿನ್ನಗೊಂಡ, ಬನಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಧರ್ಮಟ್ಟಿ ನೇತೃತ್ವದಲ್ಲಿ ವಾಲಿಬಾಲ್ ಪಂದ್ಯಾವಳಿ ಏರ್ಪಡಿಸಲಾಗಿತ್ತು.