ಕರ್ನಾಟಕ

karnataka

ETV Bharat / state

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಿಒಡಿ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ - Bagalkote

ಜಮಖಂಡಿ ಪ್ಯಾಲೇಸ್ ಬಳಿ ವಿದ್ಯಾರ್ಥಿನಿ ಸಂಶಯಾಸ್ಪದವಾಗಿ ಕಟ್ಟಡದ ಮೇಲಿಂದ ಬಿದ್ದು ಮೃತಪಟ್ಟಿದ್ದು, ಮಾನಸಿಕ ಹಿಂಸೆಯಿಂದ ನೊಂದು ಮೃತಪಟ್ಟಿದ್ದಾಳೆಯೋ ಅಥವಾ ಕೊಲೆ ಮಾಡಲಾಗಿದೆಯೋ ಎಂಬುದರ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿ ಪಾಲಕರ ಸಮೇತ ಎಸ್​​ಪಿ ಕಚೇರಿ ಆಗಮಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ದಲಿತ ಸಂಘಟನೆ ಪ್ರತಿಭಟನೆ

By

Published : Jul 16, 2019, 9:32 PM IST

ಬಾಗಲಕೋಟೆ: ಜಮಖಂಡಿ ಪಟ್ಟಣದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿನಿಯ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕು ಹಾಗೂ ಸ್ಥಳೀಯ ಸಿಪಿಐ ಹಾಗೂ ಡಿವೈಎಸ್​ಪಿ ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಬಾಗಲಕೋಟೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ದಲಿತ ಸಂಘಟನೆಗಳಿಂದ ಪ್ರತಿಭಟನೆ

ಜಮಖಂಡಿ ಪ್ಯಾಲೇಸ್ ಬಳಿ ವಿದ್ಯಾರ್ಥಿನಿ ಸಂಶಯಾಸ್ಪದವಾಗಿ ಕಟ್ಟಡದ ಮೇಲಿಂದ ಬಿದ್ದು ಮೃತಪಟ್ಟಿದ್ದು, ಮಾನಸಿಕ ಹಿಂಸೆಯಿಂದ ನೊಂದು ಮೃತಪಟ್ಟಿದ್ದಾಳೆಯೋ ಅಥವಾ ಕೊಲೆ ಮಾಡಲಾಗಿದೆಯೋ ಎಂಬುದರ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿ ಪಾಲಕರ ಸಮೇತ ಎಸ್​​ಪಿ ಕಚೇರಿ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸಂಘಟನೆ ಮುಖಂಡರಾದ ಮುತ್ತಣ್ಣ ಬೆಣ್ಣೂರು ಹಾಗೂ ಶಿವಾನಂದ ಟವಳಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಸಾರ, ಪ್ರತಿಭಟನಾಕಾರರ ಮನವಿ ಸ್ವೀಕರಿಸಿ, ಸಮಗ್ರ ಮಾಹಿತಿ ಪಡೆದುಕೊಂಡರು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

For All Latest Updates

TAGGED:

Bagalkote

ABOUT THE AUTHOR

...view details