ಬಾಗಲಕೋಟೆ: ಮುಧೋಳ ತಾಲೂಕಿನ ವಜ್ರಮಟ್ಟಿ ಗ್ರಾಮದ ದಲಿತ ಸಮುದಾಯದ ಯುವತಿ ಮೇಲೆ ಅತ್ಯಾಚಾರವೆಸಗಿ ಬಳಿಕ ಹತ್ಯೆ ಮಾಡಿ, ಘಟಪ್ರಭಾ ನದಿಗೆ ಎಸೆದಿರುವುದು ಖಂಡನೀಯ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಆರ್. ಬಿ. ತಿಮ್ಮಾಪೂರ ಹೇಳಿದ್ದಾರೆ.
ಮುಧೋಳ ಪಟ್ಟಣದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು ನಮ್ಮ ತಾಲೂಕಿನಲ್ಲಾಗಲಿ ಅಥವಾ ಜಿಲ್ಲೆಯಲ್ಲಿ ಆಗಲಿ ನಡೆಯಬಾರದು. ಕಡುಬಡತನದ ಕುಟುಂಬದಿಂದ ಬಂದು, ಕಷ್ಟಪಟ್ಟು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಂತಹ ಯುವತಿಯ ಮೇಲೆ ಈ ಕೃತ್ಯ ನಡೆದಿದ್ದು ಖಂಡನಿಯ ಎಂದರು.