ಕರ್ನಾಟಕ

karnataka

ETV Bharat / state

ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಅಭಿಯಾನಕ್ಕೆ ಡಿಸಿ ಚಾಲನೆ - kannada news

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಕಾರ್ಯಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರು, ಬಾಲಕಿಯೊಬ್ಬಳನ್ನು ಮರಳಿ ಶಾಲೆಗೆ ಸೇರಿಸಿದರು.

ಶಾಲೆ ಬಿಟ್ಟ ಮಕ್ಕಳ ಮರಳಿ ಶಾಲೆಗೆ ತರುವ ಕಾರ್ಯಕ್ಕೆ ಡಿಸಿ ಚಾಲನೆ

By

Published : Jul 27, 2019, 1:28 AM IST

ಬಾಗಲಕೋಟೆ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಅಭಿಯಾನಕ್ಕೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರು ಕುದುರೆ ಸವಾರಿ ಮಾಡುವ ಮೂಲಕ ಚಾಲನೆ ನೀಡಿದರು.

ನವನಗರದ ಆಶ್ರಯ ಕಾಲೋನಿಯಲ್ಲಿ ಚಾಲನೆ ನೀಡಿದ ಅವರು, ಶಾಲೆಯಿಂದ ದೂರವುಳಿದ ಬಾಲಕಿಯೊಬ್ಬಳ ಮನೆಗೆ ಭೇಟಿ ನೀಡಿ, ಆಕೆಯ ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾದರು.

ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 684 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಆ ಮಕ್ಕಳೆಲ್ಲ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕಾರ್ಯ ಕೈಗೊಳ್ಳಲಾಗಿದೆ. ಸರ್ಕಾರದ ಗುರಿ 14 ವರ್ಷದವರೆಗಿನ ಎಲ್ಲ ಮಕ್ಕಳು ಶಿಕ್ಷಣ ಪಡೆಯಬೇಕು ಎಂಬುದಾಗಿದ್ದು, ಇದಕ್ಕಾಗಿ ಕಾನೂನು ಜಾರಿಗೆ ತಂದಿದೆ. ಈ ಕಾನೂನಿನನ್ವಯ ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ವಿವಿಧ ಇಲಾಖೆ ಅಧಿಕಾರಿಗಳು ಪ್ರತಿ ತಿಂಗಳು ಕನಿಷ್ಟ ಒಂದು ಮಗುವನ್ನಾದರೂ ಮರಳಿ ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಲಾಗಿದೆ. ಈ ಹಿನ್ನೆಲೆ ನಾನು ಸಹ ತಿಂಗಳಿಗೆ ಒಂದು ಮಗುವನ್ನು ಶಾಲೆಗೆ ಸೇರಿಸುವ ಕಾರ್ಯ ಮಾಡುತ್ತಿದ್ದೇನೆ ಎಂದರು. ಜಮಖಂಡಿ ನಗರದಲ್ಲಿ ಡಿಡಿಪಿಐ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದ ತಂಡ 3 ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಿದ್ದಾರೆ. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಂಗೂಬಾಯಿ ಮಾನಕರ ನೇತೃತ್ವದ ತಂಡ ಸಹ 8 ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಿದ್ದಾರೆ ಎಂದು ಮಾಹಿತಿ ನೀಡಿದರು.

ABOUT THE AUTHOR

...view details