ಬಾಗಲಕೋಟೆ: ರಾಜ್ಯ ಚುನಾವಣಾ ಆಯೋಗವು ಜನವರಿ 1, 2021ರ ಅರ್ಹತಾ ದಿನಾಂಕವನ್ನು ಆಧರಿಸಿ ಮುದ್ರಿಸಲಾಗುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಪರಿಷ್ಕೃತ ವೇಳಾ ಪಟ್ಟಿ ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಷೇಶ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾತನಾಡಿದ ಅವರು, ಜನವರಿ 1, 2021ರ ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಾರಂಭಿಸಲಾಗಿದ್ದು, ಮತದಾರರ ಪಟ್ಟಿ ಸೇರ್ಪಡೆಗೆ ನಮೂನೆ-6, ತೆಗೆದುಹಾಕಲು ನಮೂನೆ-7, ತಿದ್ದುಪಡಿಗೆ ನಮೂನೆ-8 ಹಾಗೂ ಒಂದು ಮತಕ್ಷೇತ್ರದಿಂದ ಮತ್ತೊಂದು ಮತಕ್ಷೇತ್ರಕ್ಕೆ ಬದಲಾವಣೆ ಮಾಡಲು ನಮೂನೆ 8(ಎ) ಭರ್ತಿ ಮಾಡಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.