ಬಾಗಲಕೋಟೆ :ಮೇ 23 ರಂದು ನಡೆಯುವ ಲೋಕಸಭಾ ಚುನಾವಣೆಯ ಮತ ಏಣಿಕೆ ಕೇಂದ್ರವಾದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣೆ ಅಧಿಕಾರಿ ಎನ್ . ರಾಮಚಂದ್ರನ್ ತಿಳಿಸಿದ್ದಾರೆ.
ನಗರದ ಜಿಲ್ಲಾಡಳಿತ ಭವನದಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿ, ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಎಂಟು ಮತ ಕ್ಷೇತ್ರಗಳಿದ್ದು, ಪತ್ರಿ ವಿಧಾನಸಭಾ ಮತಕ್ಷೇತ್ರವಾರು 14 ಟೇಬಲ್ ಅಳವಡಿಸಲಾಗಿದೆ. ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬ ಏಣಿಕೆ ಸಹಾಯಕ ಹಾಗೂ ಒಬ್ಬ ಮೈಕ್ರೋ ಅಬ್ಸರ್ವರ್ ಒಟ್ಟು ಮೂರು ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.