ಕರ್ನಾಟಕ

karnataka

ETV Bharat / state

ಹಾಸ್ಟೆಲ್​ಗಳ ಆಹಾರ ಗುಣಮಟ್ಟ ಬಗ್ಗೆ ವಿದ್ಯಾರ್ಥಿಗಳ ಜೊತೆ ಚರ್ಚಿಸಿದ ಡಿಸಿಎಂ ಕಾರಜೋಳ - DCM In Bagalkot

ಬಾಗಲಕೋಟೆ, ಸರ್ಕಾರಿ ವಸತಿ ನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ಆಹಾರದ ಗುಣಮಟ್ಟ ಪರಿಶೀಲಿಸಬೇಕೆಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

dcm-advice
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

By

Published : Jan 26, 2020, 8:31 PM IST

ಬಾಗಲಕೋಟೆ : ಸರ್ಕಾರಿ ವಸತಿ ನಿಲಯಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಅಲ್ಲಿನ ಆಹಾರದ ಗುಣಮಟ್ಟ ಪರಿಶೀಲಿಸಬೇಕೆಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಸತಿ ನಿಲಯವನ್ನು ಉದ್ಘಾಟನೆ ಮಾಡುವ ಮುಂಚೆ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದಾಗ, ವಿದ್ಯಾರ್ಥಿನಿಯರು, ಗುಣಮಟ್ಟದ ಆಹಾರ ನೀಡುವುದಿಲ್ಲ ಎಂಬ ವಿಚಾರವನ್ನು ಸಚಿವರ ಗಮನಕ್ಕೆ ತಂದಾಗ, ಸಚಿವರು ಜಿಲ್ಲಾ ಪಂಚಾಯತ್​ ಸಿಇಓ ಹಾಗೂ ಜಿಲ್ಲಾಧಿಕಾರಿಗಳಿಗೆ ತಯಾರಾಗಿರುವ ಆಹಾರ ಟೆಸ್ಟ್ ಮಾಡಿ ಎಂದು ಆದೇಶ ನೀಡಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುತ್ತಿದೆ‌‌. ಮುಂದಿನ‌ ಬಜೆಟ್​ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟರಿಗೆ ಶಿಕ್ಷಣ, ನೀರಾವರಿ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಶಾಸಕರಾದ ಡಾ. ವೀರಣ್ಣ ಚರಂತಿಮಠ, ಹಣಮಂತ ನಿರಾಣಿ, ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ. ‌ರಾಜೇಂದ್ರ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details