ಬಾಗಲಕೋಟೆ :ರಾಜ್ಯದಲ್ಲಿ ನಡೆದ ಉಪ ಚುನಾವಣೆಯ ಎರಡು ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಜಯಭೇರಿ ಗಳಿಸಿದ ಹಿನ್ನೆಲೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿ, ಅಭಿನಂದಿಸಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ; ಸಿಎಂಗೆ ಅಭಿನಂದಿಸಿದ ವೀರಣ್ಣ ಚರಂತಿಮಠ, ಗೋವಿಂದ ಕಾರಜೋಳ - ಸಿಎಂ ಭೇಟಿಯಾದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ
ಉಪ ಚುನಾವಣೆಯಲ್ಲಿ ಕೇಸರಿ ಪಡೆ ಜಯ ಸಾಧಿಸಿದ ಹಿನ್ನೆಲೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿನಂದಿಸಿದ್ದಾರೆ..
ಗೋವಿಂದ ಕಾರಜೋಳ
ಶಾಸಕರು ಹಾಗೂ ಉಪ ಮುಖ್ಯಮಂತ್ರಿ ಕಾರಜೋಳ ಮಾತನಾಡಿ, ನಿಮ್ಮ ಅಭಿವೃದ್ಧಿ, ಪಕ್ಷದ ಸಂಘಟನೆಗೆ ಜಯ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಇದೇ ಸಮಯದಲ್ಲಿ ಯಡಿಯೂರಪ್ಪ ಅವರ ಪುತ್ರ ವಿಜೇಂದ್ರ ಸಹ ಉಪಸ್ಥಿತರಿದ್ದರು.