ಬಾಗಲಕೋಟೆ: ಪ್ರವಾಹದಿಂದ ತೊಂದರೆ ಆಗಿರುವ ಮುಧೋಳ ತಾಲೂಕಿನ ಮಿರ್ಜಿ ಗ್ರಾಮಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರ ಶಕ್ತಿಯುತವಾಗಿದೆ. ನಮ್ಮ ನಾಯಕರಾದ ಯಡಿಯೂರಪ್ಪ, ಪ್ರವಾಹ ಮತ್ತು ಕೊರೊನಾ ಮದ್ಯೆಯೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ನಾಳೆ ಬೆಳಗಾವಿಗೆ ಸಿಎಂ ಆಗಮಿಸುತ್ತಿದ್ದು, ಸ್ಥಳ ಪರಿಶೀಲನೆ ಮಾಡಲಿದ್ದಾರೆ ಎಂದರು.
ಸಿಎಂ ಸ್ಥಾನಕ್ಕೆ ಮುರುಗೇಶ್ ನಿರಾಣಿ ಸೇರಿದಂತೆ ಹಲವರು ಲಾಬಿ ವಿಚಾರವಾಗಿ ಮಾತನಾಡಿ, ಪರೋಕ್ಷವಾಗಿ ಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಟಾಂಗ್ ನೀಡಿದರು. ನನಗೆ ಗೊತ್ತಿಲ್ಲ, ನನ್ನ ಮಾಹಿತಿ ಪ್ರಕಾರ ಯಡಿಯೂರಪ್ಪ ಅವರಿಗೆ ಯಾವುದೇ ಸೂಚನೆ ಇಲ್ಲ. ಅವರು ಮುಖ್ಯಮಂತ್ರಿ ಆಗಿದ್ದಾರೆ, ಮುಂದೇನೂ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ಜುಲೈ 25 ಕ್ಕೂ ಇರ್ತಾರೆ 26ಕ್ಕೂ ಇರ್ತಾರೆ ಏನೂ ಚಿಂತೆ ಮಾಡಬೇಡಿರಿ ಎಂದರು.