ಕರ್ನಾಟಕ

karnataka

ಯುಕೆಪಿ ಯೋಜನೆಯ ಕಾಮಗಾರಿ ಚುರುಕುಗೊಳಿಸಲು ಡಿಸಿಎಂ ಗೋವಿಂದ ಕಾರಜೋಳ ಸೂಚನೆ

ಯುಕೆಪಿಯ ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳ ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿಎಂ ಗೋವಿಂದ ಕಾರಜೋಳ, ಮೂರುವರೆ ವರ್ಷದೊಳಗೆ ಕಾಮಗಾರಿಗಳನ್ನು ಮುಗಿಸುವಂತೆ ಸೂಚಿಸಿದರು.

By

Published : Feb 13, 2020, 3:13 AM IST

Published : Feb 13, 2020, 3:13 AM IST

DCM Govinda Karajola
ಡಿಸಿಎಂ ಗೋವಿಂದ ಕಾರಜೋಳ

ಬಾಗಲಕೋಟೆ:ಕೃಷ್ಣ ಮೇಲ್ದಂಡೆ ಯೋಜನೆಯ (ಯುಕೆಪಿ) ಪ್ರಮುಖ ನೀರಾವರಿ ಯೋಜನೆಗಳು ಹಾಗೂ ಪುನರ್ವಸತಿ ಯೋಜನೆಗಳ ಕಾಮಗಾರಿಯನ್ನು ಮೂರುವರೆ ವರ್ಷದೊಳಗೆ ಮುಗಿಸುವುದಕ್ಕೆ ಸರ್ಕಾರ ಬದ್ದವಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ಯುಕೆಪಿ ಯೋಜನೆಯ ಕಾಮಗಾರಿ ಚುರುಕುಗೊಳಿಸಲು ಡಿಸಿಎಂ ಗೋವಿಂದ ಕಾರಜೋಳ ಸೂಚನೆ

ನಗರದಲ್ಲಿ ಯುಕೆಪಿಯ ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳ ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿಎಂ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಎಂಜಿನಿಯರ್​ಗಳಿಗೆ ಹೆಚ್ಚು ಹಣ ಬಿಡುಗಡೆ ಮಾಡುವುದಕ್ಕೆ ಅವಕಾಶ ಇಲ್ಲ. ಈಗಾಗಲೇ 577 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದರೂ ಕೇವಲ‌ 36 ಕೋಟಿ ರೂ. ಬಳಕೆ ಮಾಡಿದ್ದಾರೆ. ಶೇ. 20 ರಷ್ಟು ಕೆಲಸವಾಗಿದ್ದು, ಆಮೆಗತಿಯಲ್ಲಿ ಕಾಮಗಾರಿ ಸಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಅಧಿಕಾರಿಗಳು ಹೇಳಿರುವ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿದ ಡಿಸಿಎಂ, ಮೂರುವರೆ ವರ್ಷದೊಳಗೆ ಯುಕೆಪಿ ಅಡಿಯಲ್ಲಿನ ಯೋಜನೆಗಳ ಕಾಮಗಾರಿಗಳನ್ನು ಮುಗಿಸುವಂತೆ ಸೂಚಿಸಿದರು.

ABOUT THE AUTHOR

...view details