ಕರ್ನಾಟಕ

karnataka

ETV Bharat / state

ಬಾಗಲಕೋಟೆ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಡಿಸಿಎಂ

ಪ್ರವಾಹ ಪೀಡಿತ ಜಿಲ್ಲೆಯ ಬಾದಾಮಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೋಮವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

DCM Govinda Karajola
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

By

Published : Aug 17, 2020, 10:16 PM IST

ಬಾಗಲಕೋಟೆ: ಪ್ರವಾಹ ಬಾಧಿತ ಜಿಲ್ಲೆಯ ಬಾದಾಮಿ ತಾಲೂಕಿನ ವಿವಿಧ ಪ್ರದೇಶಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೋಮವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಡಿಸಿಎಂ

ನವಿಲುತೀರ್ಥ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಲಪ್ರಭಾ ನದಿಗೆ 24 ಕ್ಯೂಸೆಕ್ ನೀರು ಹರಿದು ಬರುತ್ತಿರುವುದರಿಂದ ಬಾದಾಮಿ ತಾಲೂಕಿನ ಗೋವಿನಕೊಪ್ಪ, ಪಟ್ಟದಕಲ್ಲು, ಚೊಳಚಗುಡ್ಡ, ಜಕನೂರ, ಬೂದಿಹಾಳ, ನೀರಲಗಿ, ತನ್ನಿಹಾಳ, ಕಾಕರಕಿ, ಮುಮರಡ್ಡಿಕೊಪ್ಪ, ಖ್ಯಾಡ, ಮನ್ನಿಕೇರಿ ಸೇರಿದಂತೆ 34 ಗ್ರಾಮಗಳಿಗೆ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆ ಇದ್ದು, ಗ್ರಾಮದ ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಾದಾಮಿ ತಾಲೂಕಿನ ಚೊಳಚಗುಡ್ಡ ಗ್ರಾಮದ ಬಳಿ ಇರುವ ಸೇತುವೆಗೆ ಭೇಟಿ ನೀಡಿ ನೀರಿನ ಪ್ರಮಾಣವನ್ನು ವೀಕ್ಷಿಸಿದರು. ನಂತರ ಗೋವಿನಕೊಪ್ಪ ಗ್ರಾಮದ ಬಳಿ ಇರುವ ಹಳೆಯ ಸೇತುವೆ ಜಲಾವೃತಗೊಂಡ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಮುಂಜಾಗ್ರತಾ ಕ್ರಮ ಹಾಗೂ ಗ್ರಾಮದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

ಇನ್ನು ಭೇಟಿ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಬಾದಾಮಿ ತಹಶೀಲ್ದಾರ ಇಂಗಳೆ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ABOUT THE AUTHOR

...view details