ಕರ್ನಾಟಕ

karnataka

ETV Bharat / state

ಪೋಸ್ಟ್​ ಮಾರ್ಟಮ್​ಗೆ ಕರೆದೊಯ್ಯುವಾಗ 'ಸತ್ತ ವ್ಯಕ್ತಿ'ಗೆ ಬಂತು 'ಜೀವ'! - ಶಂಕರ ಗೊಂಬಿ ಸುದ್ದಿ

ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುವ ವೇಳೆ ವ್ಯಕ್ತಿಗೆ ಜೀವ ಇರುವ ಬಗ್ಗೆ ತಿಳಿದು ಬಂದಿದ್ದು, ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿರುವ ಘಟನೆ ನಡೆದಿದೆ.

Bagalkote
ಶಂಕರ ಗೊಂಬಿ

By

Published : Mar 2, 2021, 11:13 AM IST

Updated : Mar 3, 2021, 8:42 PM IST

ಬಾಗಲಕೋಟೆ:ಮೃತಪಟ್ಟಿದ್ದಾನೆಂದು ಶವಾಗಾರಕ್ಕೆ ವ್ಯಕ್ತಿಯ ದೇಹವನ್ನು ತೆಗೆದುಕೊಂಡು ಹೋಗುವ ಸಮಯದಲ್ಲಿ ‌ಜೀವ ಇರುವ ಬಗ್ಗೆ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿರುವ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ನಡೆದಿದೆ.

ಕಳೆದ ಶನಿವಾರ ಮಹಾಲಿಂಗಪುರ ರಬಕವಿ ರಸ್ತೆಯಲ್ಲಿ ಸಂಭವಿಸಿದ ಅಪಘಾತ ಸಂಭವಿಸಿತ್ತು. ಬೈಕ್​ ಅಪಘಾತದಲ್ಲಿ ಶಂಕರ ಎಂಬುವವರು ಗಾಯಗೊಂಡಿದ್ದರು. ತಲೆಗೆ ಏಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಂಕರ ಗೊಂಬಿಗೆ, ಹೆಚ್ಚಿನ ಚಿಕಿತ್ಸೆಗಾಗಿ ವೆಂಟಿಲೇಟರ್ ಮೂಲಕ ಆ್ಯಂಬುಲೆನ್ಸ್​ನಲ್ಲಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿಸಿತ್ತು. ಆದ್ರೆ ವ್ಯಕ್ತಿ ಬದುಕುವ ಸಾಧ್ಯತೆ ಕಡಿಮೆ ಇದೆ ಎಂದು ವಾಪಸ್ ಕಳುಹಿಸಿದ್ದರು. ಇನ್ನು ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಸಂದರ್ಭದಲ್ಲಿ ಇಲ್ಲಿನ ವೈದ್ಯರು ಸಹ ಮೃತ‌ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನಲೆ ಮರಣೋತ್ತರ ಪರೀಕ್ಷೆ ನಡೆಸಲು ತಯಾರಿ ಮಾಡಲಾಗಿತ್ತು. ಆದರೆ, ಪರೀಕ್ಷೆಗೆಂದು ಕರೆದುಕೊಂಡು ಹೋಗುವ ವೇಳೆ ವ್ಯಕ್ತಿಯ ಕಾಲುಗಳು ಅಲುಗಾಡಿವೆ. ಈ ವೇಳೆ ಜೀವಂತವಿರುವ ಬಗ್ಗೆ ತಿಳಿದುಬಂದಿದೆ.

ಇನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು‌ ಹೋಗಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಂಕರ್ ಸಾವನ್ನಪ್ಪಿದ್ದಾರೆ ಎಂದು ಅವರ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದರು.

Last Updated : Mar 3, 2021, 8:42 PM IST

ABOUT THE AUTHOR

...view details