ಬಾಗಲಕೋಟೆ: ಖಾಸಗಿ ಶಾಲೆಗಳು ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ಸರ್ಕಾರದ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಮೂರು ಸೂತ್ರಗಳ ನಿಯಮ ಅಳವಡಿಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಾಥಮಿಕ ಹಾಗೂ ಫ್ರೌಡ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಡೆದ ಇನ್ಫೋಸಿಸ್ ಫೌಂಡೇಶನ್ ಕಂಪ್ಯೂಟರ್ ವಿತರಣಾ ಸಮಾರಂಭಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ವಾರ ಶಿಕ್ಷಣ ಇಲಾಖೆಯ ಆಯುಕ್ತರು, ಪೋಷಕರು ಮತ್ತು ಖಾಸಗಿ ಶಾಲೆಯ ಪ್ರತಿನಿಧಿಗಳ ಸಭೆ ಕರೆದು ಚರ್ಚೆ ಮಾಡಿ, ಅಭಿಪ್ರಾಯಗಳನ್ನು ಸಂಗ್ರಹ ಮಾಡಲಾಗಿದೆ.
ಸರ್ಕಾರದ ಮುಂದೆ ಮೂರು ಸೂತ್ರ ಇಟ್ಟಿದ್ದಾರೆ. ಇದರ ಬಗ್ಗೆ ನಾನು ಹಾಗೂ ಪ್ರಧಾನ ಕಾರ್ಯದರ್ಶಿಗಳು ಚರ್ಚೆ ಮಾಡಿದ್ದೇವೆ. ಜೊತೆಗೆ ಎಂಎಲ್ಸಿಗಳೊಂದಿಗೂ ಕೂಡ ಚರ್ಚೆ ಮಾಡಿದ್ದೇವೆ. ಇಷ್ಟರಲ್ಲಿಯೇ ಪೋಷಕರಿಗೆ ಭಾರ ಆಗದಂತೆ ಮತ್ತು ಖಾಸಗಿ ಶಾಲಾ ಶಿಕ್ಷಕರಿಗೆ ವೇತನ ಸಿಗುವಂತಹ ಸೂತ್ರವನ್ನು ಪ್ರಕಟಿಸುತ್ತೇವೆ ಎಂದರು.