ಬಾಗಲಕೋಟೆ :ಜಿಲ್ಲೆಯಸಾವಳಗಿ ಗ್ರಾಮವನ್ನು ತಾಲೂಕು ಕೇಂದ್ರವಾಗಿ ಘೋಷಿಸುವಂತೆ ಆಗ್ರಹಿಸುತ್ತಲೇ ಬಂದಿದ್ದರೂ ಜನಪ್ರತಿನಿಧಿಗಳು ಸ್ಪಂದಿಸದ ಹಿನ್ನೆಲೆ, ಈ ಬಾರಿ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ.
ಸಾವಳಗಿಯನ್ನು ತಾಲೂಕು ಕೇಂದ್ರವಾಗಿ ಘೋಷಿಸುವಂತೆ ಸುಮಾರು 70 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿದರೂ, ಕಡೆಗಣಿಸುತ್ತಲೇ ಬರಲಾಗಿದೆ. ರಾಜ್ಯದಲ್ಲಿ ಹಲವಾರು ಗ್ರಾಮಗಳನ್ನು ನೂತನ ತಾಲೂಕು ಕೇಂದ್ರಗಳನ್ನಾಗಿ ಘೋಷಣೆ ಮಾಡಲಾಗಿದೆ. ಆದರೆ ಸಾವಳಗಿಯನ್ನು ಮಾತ್ರ ತಾಲೂಕು ಕೇಂದ್ರವನ್ನಾಗಿ ಘೋಷಿಸಲು ಹಿಂದೇಟು ಹಾಕಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.