ಬಾಗಲಕೋಟೆ:ವಾಲ್ಮೀಕಿ ಜನಾಂಗದವರಿಗೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸುವ ಬಗ್ಗೆ ಅಧಿವೇಶನದಲ್ಲಿ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು ಎಂದು ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಅಧ್ಯಕ್ಷರಾದ ರಾಜು ನಾಯ್ಕರ ಒತ್ತಾಯಿಸಿದ್ದಾರೆ.
ವಾಲ್ಮೀಕಿ ಜನಾಂಗದ ಮೀಸಲಾತಿ ಹೆಚ್ಚಿಸದಿದ್ದಲ್ಲಿ ಪಕ್ಷಾತೀತ ಹೋರಾಟ ಖಚಿತ: ರಾಜು ನಾಯ್ಕರ
ಇದು ಕೇವಲ ವಾಲ್ಮೀಕಿ ಜನಾಂಗದವರಿಗೆ ಮಾತ್ರ ಸಿಮೀತವಾಗಿಲ್ಲ. ಇದರಿಂದ ಇತರ ಹಿಂದುಳಿದ ಜನಾಂಗದವರಿಗೆ ಸೌಲಭ್ಯಗಳು ಸಿಗಲಿವೆ. ಒಂದು ವೇಳೆ ಅಧಿವೇಶನದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳದೆ ಇದ್ದಲ್ಲಿ ಮುಂದೆ ವಾಲ್ಮೀಕಿ ಜನಾಂಗದ ಶ್ರೀಗಳಾದ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ನೇತೃತ್ವದಲ್ಲಿ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಅಧ್ಯಕ್ಷರಾದ ರಾಜು ನಾಯ್ಕರ ಒತ್ತಾಯಿಸಿದ್ದಾರೆ.
ಅವರು ನವನಗರದ ಪ್ರೆಸ್ ಕಬ್ಲ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಕಳೆದ ಎರಡು ವರ್ಷಗಳಿಂದ ನಮ್ಮ ಜನಾಂಗದ ಯಾವುದೇ ಬೇಡಿಕೆಯನ್ನು ಸರ್ಕಾರ ಈಡೇರಿಸುತ್ತಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಚಿವರು ಭರವಸೆ ನೀಡಿದ್ದರು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶ್ರೀರಾಮುಲು ಸಚಿವರಾಗಿದ್ದು, ಅವರ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಿ ಸರ್ಕಾರಕ್ಕೆ ವರದಿ ನೀಡಲಾಗಿದೆ. ಈಗ ಇದೇ ತಿಂಗಳು 21 ರಂದು ಅಧಿವೇಶನ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರು ವರದಿಯನ್ನು ಗಮನಕ್ಕೆ ತೆಗೆದುಕೊಂಡು ಮೀಸಲಾತಿ ಹೆಚ್ಚಿಸಬೇಕು ಎಂದರು.
ಇದು ಕೇವಲ ವಾಲ್ಮೀಕಿ ಜನಾಂಗದವರಿಗೆ ಮಾತ್ರ ಸಿಮೀತವಾಗಿಲ್ಲ. ಇದರಿಂದ ಇತರ ಹಿಂದುಳಿದ ಜನಾಂಗದವರಿಗೆ ಸೌಲಭ್ಯಗಳು ಸಿಗಲಿವೆ. ಒಂದು ವೇಳೆ ಅಧಿವೇಶನದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳದೆ ಇದ್ದಲ್ಲಿ ಮುಂದೆ ವಾಲ್ಮೀಕಿ ಜನಾಂಗದ ಶ್ರೀಗಳಾದ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ನೇತೃತ್ವದಲ್ಲಿ ಸಭೆ ಮಾಡಿ ಪಕ್ಷಾತೀತವಾಗಿ ಹೋರಾಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜು ನಾಯ್ಕರ ತಿಳಿಸಿದ್ದಾರೆ.