ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಧಿತ ಕುಟುಂಬದವರಿಗೆ ಯೋಗ್ಯ ಪರಿಹಾರ ಹಾಗೂ ರಾಷ್ಟ್ರೀಯ ಪುನರ್ ವಸತಿ ನೀತಿ ಅನುಸಾರ ಪುನರ್ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರ ಜಿಲ್ಲಾಡಳಿತ ಭವನದ ಎದುರು ರೈತರು ಪ್ರತಿಭಟನೆ ನಡೆಸಿದರು.
ಬಾಗಲಕೋಟೆಯಲ್ಲಿ ಪುನರ್ವಸತಿ ಕಲ್ಪಿಸಲು ಆಗ್ರಹಿಸಿ ರೈತರಿಂದ ಪ್ರತಿಭಟನೆ
ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಧಿತ ಕುಟುಂಬದವರಿಗೆ ಯೋಗ್ಯ ಪರಿಹಾರ ಹಾಗೂ ರಾಷ್ಟ್ರೀಯ ಪುನರ್ ವಸತಿ ನೀತಿ ಅನುಸಾರ ಪುನರ್ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರ ಜಿಲ್ಲಾಡಳಿತ ಭವನದ ಎದುರು ರೈತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ರೈತರು, ಯುಕೆಪಿ ಯೋಜನೆಯ ಮೂರನೇ ಹಂತದಲ್ಲಿ ಮುಳುಗಡೆ ಆಗಲಿರುವ ಜಮೀನುಗಳಿಗೆ ಈಗಿನ ಮಾರುಕಟ್ಟೆ ದರದಂತೆ ಪ್ರತಿ ಎಕರೆಗೆ 20ರಿಂದ 30 ಲಕ್ಷ ರೂ.ಗಳನ್ನು ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಜಿಲ್ಲಾಡಳಿತ ಭವನಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಇನ್ನು ಸಾವರಿನ್ ಸಕ್ಕರೆ ಕಾರ್ಖಾನೆಯವರಿಂದ ಬಾಕಿ ಹಣ ನೀಡುವಲ್ಲಿ ವಿಳಂಬವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ರೈತರಿಗೆ ಪರಿಹಾರ ನೀಡುವಂತೆ ಜಿಲ್ಲಾಡಳಿತ ಕ್ರಮ ತೆಗೆದುಕೊಳಬೇಕು ಎಂದು ಆಗ್ರಹಿಸಿದರು. ಇನ್ನು ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಿಮಕಿ ನಡೆದು ಕೆಲ ಸಮಯ ಗೊಂದಲ ಉಂಟಾಯಿತು.