ಬಾಗಲಕೋಟೆ :ಉದ್ಯೋಗ ಖಾತರಿ ಯೋಜನೆಯಡಿ ಗಿರಿಸಾಗರ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರ ಹೊಲದಲ್ಲಿ ಹಮ್ಮಿಕೊಂಡ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಬುಧವಾರ ಭೇಟಿ ನೀಡಿ ಕೂಲಿ ಕಾರ್ಮಿಕರ ಆರೋಗ್ಯ ವಿಚಾರಿಸಿದರು.
ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಮೇ 4ರಿಂದ ಲಾಕ್‍ಡೌನ್‍ನಲ್ಲಿ ಕೆಲ ಸಡಿಲಿಕೆ ಮಾಡಲಾಗಿದೆ. ಗ್ರಾಮದ ಜನತೆ ಹೊಟ್ಟೆಗೆ ಅನ್ನವಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಬಾರದು ಎಂಬ ಉದ್ದೇಶದಿಂದ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡಲಾಗುತ್ತಿದೆ. ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ ಭೇಟಿ ನೀಡಿದ ಸ್ಥಳದಲ್ಲಿ 70ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಬೆಳಗ್ಗೆ ಕೆಲಸಕ್ಕೆ ಹಾಜರಾಗಿದ್ದರು.