ಕರ್ನಾಟಕ

karnataka

ETV Bharat / state

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ - ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆಯನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡಬಾರದು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

DSS protest against state government
ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

By

Published : Jul 10, 2020, 5:27 PM IST

ಬಾಗಲಕೋಟೆ:ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲಾಡಳಿತ ಭವನ ಎದುರು ದಲಿತ ಸಂಘರ್ಷ ಸಮಿತಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಸಂಚಾಲಕರಾದ ಹನಮಂತ ಚಿಮ್ಮಲಗಿ, ಶಿವಾನಂದ ಮಾದರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ ಸದಸ್ಯರು

ಬಂಡವಾಳಶಾಹಿ ಹಾಗೂ ಕಾರ್ಪೋರೇಟ್​​​ ಒತ್ತಾಯದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದರೆ ಆಗುವ ಅನಾಹುತಗಳಿಗೆ ನೇರವಾಗಿ ರೈತರೇ ಬಲಿಪಶುಗಳಾಗುತ್ತಾರೆ. ಈ ನಿರ್ಧಾರದಿಂದ ಕೂಡಲೇ ಹಿಂದೆ ಸರಿಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ABOUT THE AUTHOR

...view details