ಬಾಗಲಕೋಟೆ:ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅನ್ನದಾತರ ಬಗ್ಗೆ ಸದಾ ಚಿಂತನೆ ಮಾಡುತ್ತಿರುತ್ತಾರೆ. ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡಿರುವ ಅವರು ಬೇರೆ ಬೇರೆ ಬದಲಾವಣೆಯನ್ನು ಮಾಡುವ ಮೂಲಕ ಕೃಷಿ ಉದ್ಯೋಗದಲ್ಲಿ ಸಾಕಷ್ಟು ಅನುಕೂಲವನ್ನು ರೈತರಿಗೆ ಮಾಡಿಕೊಟ್ಟಿದ್ದಾರೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಶುಕ್ರವಾರ ಬಿಜೆಪಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸುಶಾಸನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರೈತರ ಖಾತೆಗಳಿಗೆ ಶುಕ್ರವಾರ ನೇರವಾಗಿ 2000 ರೂ.ಗಳನ್ನು ಜಮೆ ಮಾಡಿಸಿದ್ದನ್ನು ನೋಡಿದರೆ ರೈತರ ಬಗ್ಗೆ ಎಷ್ಟು ಕಾಳಜಿಯನ್ನು ಹೊಂದಿದ್ದಾರೆ ಎಂಬುದನ್ನು ತೋರಿಸುತ್ತದೆ. ರೈತರು ಬೆಳೆದಂತಹ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.