ಕರ್ನಾಟಕ

karnataka

ETV Bharat / state

ಬ್ಲ್ಯಾಕ್ ಫಂಗಸ್​ಗೆ ಬಾಗಲಕೋಟೆ ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಬಲಿ

ಬಾಗಲಕೋಟೆಯ ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಮಹಾಂತೇಶ್ ಉದುಪುಡಿ ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂದ್ರ)ನಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಐದು ಮಂದಿ ಕಪ್ಪು ಶಿಲೀಂದ್ರ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

mahantesh
mahantesh

By

Published : Jun 2, 2021, 8:10 PM IST

ಬಾಗಲಕೋಟೆ: ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಲೋಕಾಪೂರ ಗ್ರಾಮದ ಮಹಾಂತೇಶ್ ಉದುಪುಡಿ ಬ್ಲ್ಯಾಕ್ ಫಂಗಸ್​ನಿಂದ ಸಾವನ್ನಪ್ಪಿದ್ದಾರೆ.

ಕೊರೊನಾ ಸೋಂಕು ದೃಢ ಪಟ್ಟ ನಂತರ, ಮೊದಲು ಮುಧೋಳದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್​ಗೆ ಕರೆದುಕೊಂಡು ಹೋಗಿದ್ದಾರೆ. ಬ್ಲ್ಯಾಕ್ ಫಂಗಸ್ ಬಂದ‌ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಏರ್ ಆ್ಯಂಬುಲೆನ್ಸ್​ ಮೂಲಕ ಜೈಪುರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿ ಶಸ್ತ್ರಚಿಕಿತ್ಸೆ ಸೇರಿದಂತೆ ಎಲ್ಲ ಚಿಕಿತ್ಸೆ ನೀಡಿದ ಬಳಿಕ ಸ್ವಲ್ಪ ಮಟ್ಟಿಗೆ ಗುಣಮುಖರಾಗಿದ್ದಾರೆ. ಇನ್ನೇನು ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕು ಎನ್ನುವಷ್ಟರಲ್ಲಿಯೇ ಮತ್ತೆ ಜ್ವರ ಕಾಣಿಸಿಕೊಂಡಿದೆ. ಈ ಸಮಯದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿರುವ ಸಮಯದಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳ ಸಾವಿನ ಸಂಖ್ಯೆ 5ಕ್ಕೆ ಏರಿದೆ.

ಮೃತರು ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜಿಲ್ಲಾ ಪಂಚಾಯತ್​ ಸದಸ್ಯರಾಗಿ, ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಯುವ ರಾಜಕಾರಣಿ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ABOUT THE AUTHOR

...view details