ಬಾಗಲಕೋಟೆ:ಪಂಜಾಬ್ನಿಂದ ಜಿಲ್ಲೆಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಲಾರಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅಬಕಾರಿ ಇಲಾಖೆ ಸಿಪಿಐ ಸದಾಶಿವ ಕೊರ್ತಿ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಸಿಪಿಐ ಸದಾಶಿವ ಕೊರ್ತಿ ನೇತೃತ್ವದಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಫೀಮು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದ್ದಾರೆ. ಲಾರಿ ಮೂಲಕ ಅಫೀಮು ಮಾರಲು ಬಂದಿದ್ದ ಪಂಜಾಬ್ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಐದಾರು ದಿನಗಳಿಂದ 10 ಕೆಜಿಗೂ ಅಧಿಕ ಅಫೀಮನ್ನು ಇಟ್ಟುಕೊಂಡು ಆರೋಪಿಗಳು ಪಟ್ಟಣದಲ್ಲಿ ತಿರುಗಾಡುತ್ತಿದ್ದರು. ಈ ಕುರಿತಂತೆ ಮಾಹಿತಿ ಪಡೆದ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿತ್ತು.
ಕಾಲೇಜು ವಿದ್ಯಾರ್ಥಿಗಳಿಗೆ, ಡಾಬಾಗಳಿಗೆ ಅಫೀಮು ಅನ್ನು ಮಾರಾಟ ಮಾಡುತ್ತಿದ್ದರು ಎಂದು ಶಂಕಿಸಲಾಗಿದೆ. ಬಂಧಿತರಿಂದ 5 ಲಕ್ಷಕ್ಕೂ ಅಧಿಕ ಮೌಲ್ಯದ ಅಫೀಮನ್ನು ಜಫ್ತಿ ಮಾಡಲಾಗಿದೆ.
ಇದನ್ನೂ ಓದಿ: ಆರ್ಥಿಕ ಶಿಸ್ತು ತರಲು ಅಪ್ರಿಯವಾದರೂ ಕಠಿಣ ಕ್ರಮ ಕೈಗೊಳ್ಳಲಿದ್ದೇನೆ: ಸಿಎಂ ಬೊಮ್ಮಾಯಿ