ಕರ್ನಾಟಕ

karnataka

ETV Bharat / state

ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ; ಯಡಿಯೂರಪ್ಪ - Yeddyurappa

ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಪಡೆದುಕೊಂಡು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರಾಗಿ ಅಮಿತ್ ಶಾ ಅಧಿಕಾರ ಹಿಡಿಯುವಂತೆ ಶ್ರಮಿಸಲಾಗುವುದು ಎಂದು ಸಿಎಂ ಬಿಸ್​ವೈ ಹೇಳಿದರು.

asds
ನೂತನ ಕೃಷಿ ಕಾನೂನುಗಳಿಂದ ರೈತರಿಗೆ ದ್ರೋಹವಾಗಲ್ಲ ಎಂದ ಸಿಎಂ

By

Published : Jan 17, 2021, 5:54 PM IST

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರಿಗೆ ಅಗತ್ಯವಿರುವ ಕಾನೂನುಗಳನ್ನು ಜಾರಿಗೆ ತರುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ನೂತನ ಕೃಷಿ ಕಾನೂನುಗಳಿಂದ ರೈತರಿಗೆ ದ್ರೋಹವಾಗಲ್ಲ ಎಂದ ಸಿಎಂಯಡಿಯೂರಪ್ಪ ಹೇಳಿಕೆ

ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದ ಬಳಿ ನಿರಾಣಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಕೇದಾರನಾಥ ಸಕ್ಕರೆ ಕಾರ್ಖಾನೆ ಚಾಲನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದ್ದರು. ಮಾತು ಮುಂದುವರೆಸಿದ ಬಿಎಸ್​ವೈ, ರೈತರ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿವೆ. ಮುಂದಿನ ದಿನಗಳಲ್ಲಿ ರೈತರ ಏಳಿಗೆಗಾಗಿ ಶ್ರಮಿಸುತ್ತೇವೆ ಎಂದರು.

ಮುರುಗೇಶ್​ ನಿರಾಣಿ ಕೈಗಾರಿಕಾ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಈ ಭಾಗದಲ್ಲಿ ನಿರುದ್ಯೋಗ ಹೋಗಲಾಡಿಸಿ ರೈತರಿಗೆ ಅನುಕೂಲವಾಗುವಂತಾಗಲಿ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಪಡೆದುಕೊಂಡು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರಾಗಿ ಅಮಿತ್ ಶಾ ಅಧಿಕಾರ ಹಿಡಿಯುವಂತೆ ಶ್ರಮಿಸಲಾಗುವುದು ಎಂದರು. ಇದೇ ಸಮಯದಲ್ಲಿ ಸಚಿವ ಮುರಗೇಶ ನಿರಾಣಿ ಕುರಿತ ವಿಜಯ ಪತಾಕೆ ಹಾಗೂ ಅಮಿತ್ ಶಾ ಕುರಿತ ನವಭಾರತ ಹರಿಕಾರ ಎಂಬ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ABOUT THE AUTHOR

...view details