ಬಾಗಲಕೋಟೆ: ಮಹಾರಾಷ್ಟ್ರದ ಸಹ್ಯಾದ್ರಿ ಬೆಟ್ಟದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕೃಷ್ಣ ಹಾಗೂ ಘಟಪ್ರಭಾ ನದಿಗಳಿಗೆ ಪ್ರವಾಹದ ಭೀತಿ ಎದುರಾಗಿದೆ.
ಮಹಾರಾಷ್ಟ್ರದಲ್ಲಿ ಹೆಚ್ಚಾದ ಮಳೆ: ಜಮಖಂಡಿಯಲ್ಲಿ ಪ್ರವಾಹ ಭೀತಿ
ಮಹಾರಾಷ್ಟ್ರ ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೊಯ್ನಾ ಹಾಗೂ ಧೂದ್ಗಂಗಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಇದರಿಂದ ಜಮಖಂಡಿ ತಾಲೂಕಿನಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ.
ಜಿಲ್ಲೆಯ ಹಿಪ್ಪರಗಿ ಜಲಾಶಯದಲ್ಲಿ 521.60 ಮೀಟರ್ ನೀರು ಸಂಗ್ರಹವಾಗಿದ್ದು, ಒಟ್ಟು ಸಂಗ್ರಹದ ಸಾಮರ್ಥ್ಯ 3.14 ಟಿಎಂಸಿ ಇದೆ. ಒಳಹರಿವು 44 ಸಾವಿರ ಕ್ಯೂಸೆಕ್ ಇದ್ದು, ಅಷ್ಟೇ ಪ್ರಮಾಣದ ನೀರನ್ನು ಆಲಮಟ್ಟಿ ಡ್ಯಾಂಗೆ ಬಿಡಲಾಗುತ್ತಿದೆ. ಇದೀಗ ಹಿಪ್ಪರಗಿ ಜಲಾಶಯದಿಂದ ಚಿಕ್ಕ ಪಡಸಲಗಿ ಬ್ಯಾರೇಜ್ ಮೂಲಕ ನೀರನ್ನು ಹರಿಬಿಡಲಾಗುತ್ತಿದೆ.
ಮಹಾರಾಷ್ಟ್ರ ರಾಜ್ಯದ ಹೆಚ್ಚು ಮಳೆಯಿಂದಾಗಿ ಕೊಯ್ನಾ ಹಾಗೂ ಧೂದ್ಗಂಗಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಇದರಿಂದ ಜಮಖಂಡಿ ತಾಲೂಕಿನಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, 1 ಲಕ್ಷ ಕ್ಯೂಸೆಕ್ಗೂ ಅಧಿಕ ಪ್ರಮಾಣದಲ್ಲಿ ಒಳಹರಿವು ಬಂದಲ್ಲಿ ಪ್ರವಾಹ ಭೀತಿ ಎದುರಾಗಲಿದೆ.