ಬಾಗಲಕೋಟೆ:ಪ್ರವಾಹ ಸಂತ್ರಸ್ತರಾಗಿರುವ ಜನತೆಗೆ ವಿವಿಧ ಸೌಕರ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಭೀಮವಾದ) ಸಂಘಟನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರವಾಹ ಸಂತ್ರಸ್ತರಿಗೆ ಸರಿಯಾದ ಸೌಕರ್ಯ ನೀಡಿ: ದಸಂಸ ಆಗ್ರಹ - ಬಾಗಲಕೋಟೆ
ಪ್ರವಾಹ ಸಂತ್ರಸ್ತರಾಗಿರುವ ಜನತೆಗೆ ವಿವಿಧ ಸೌಕರ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ( ಭೀಮವಾದ) ಸಂಘಟನೆ ವತಿಯಿಂದ ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
![ಪ್ರವಾಹ ಸಂತ್ರಸ್ತರಿಗೆ ಸರಿಯಾದ ಸೌಕರ್ಯ ನೀಡಿ: ದಸಂಸ ಆಗ್ರಹ](https://etvbharatimages.akamaized.net/etvbharat/prod-images/768-512-4284174-thumbnail-3x2-.jpg)
ಪ್ರವಾಹ ಸಂತ್ರಸ್ತರಿಗೆ ವಿವಿಧ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರವಾಹ ಸಂತ್ರಸ್ತರಿಗೆ ವಿವಿಧ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಜಮಖಂಡಿ, ಮುಧೋಳ, ಬಾದಾಮಿ ಹಾಗೂ ಹುನಗುಂದ ತಾಲೂಕಿನಲ್ಲಿ ಇತ್ತೀಚೆಗೆ ನೆರೆ ಬಂದು ನೀರಿನಲ್ಲಿ ಜನರ ಬದುಕು ಕೊಚ್ಚಿ ಹೋಗಿದೆ. ಇಂತಹ ಸಂತ್ರಸ್ತರಿಗೆ ಸರ್ಕಾರ ಶಾಸ್ವತ ಸೌಲಭ್ಯ ನೀಡಬೇಕು ಎಂದು ದಲಿತ ಸಂಘಟನೆ ಮುಖಂಡ ಪರಶುರಾಮ ನೀಲನಾಯಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತಾ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಸಂತ್ರಸ್ತರು ತಮಗೆ ಸರಿಯಾಗಿ ಸೌಲಭ್ಯ ನೀಡುತ್ತಿಲ್ಲ ಎಂದು ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
Last Updated : Aug 30, 2019, 6:14 AM IST