ಬಾಗಲಕೋಟೆ:ಜಿಲ್ಲೆಯ ಕೆರೂರ ಪಟ್ಟಣದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಬಾಗಲಕೋಟೆ: ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಸಿದ್ದರಾಮಯ್ಯ ಚಾಲನೆ - latest bagalkote news
ಕೆರೂರ ಪಟ್ಟಣದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಬಾದಾಮಿ ಮತಕ್ಷೇತ್ರದಲ್ಲಿ ನಾನು ಶಾಸಕರಾಗಿರುವವರೆಗೆ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಅಭಿವೃದ್ಧಿಪರ ಕಾರ್ಯಗಳನ್ನು ಮಾಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವ್ಯಕ್ತಿಯೋರ್ವ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಎಂದು ತಿಳಿಸಿದಾಗ, ಇದೇ ಕ್ಷೇತ್ರದಲ್ಲಿ ನನ್ನ ವಿರುದ್ಧ ನಿಂತ ಆ ವ್ಯಕ್ತಿ ಶ್ರೀರಾಮಲು ಆರೋಗ್ಯ ಸಚಿವರಾಗಿದ್ದಾರೆ. ನೀವು ಮತ ನೀಡಿದ್ದೀರಲ್ಲವೇ ಅವರಿಗೇ ಕೇಳಿ. ಆ ಮನುಷ್ಯ ನನ್ನ ಜೊತೆ ಮಾತನಾಡುವುದಿಲ್ಲ ಎಂದು ವ್ಯಂಗ್ಯವಾಡಿದ್ರು.
ಬಳಿಕ, ಆರೋಗ್ಯ ಸಚಿವರಿಗೆ, ವೈದ್ಯರನ್ನು ನೀಡುವಂತೆ ಪತ್ರ ಬರೆಯುವುದಾಗಿ ತಿಳಿಸಿದರು. ನಂತರ ಬಾದಾಮಿಗೆ ತೆರಳಿ ಅಧಿಕಾರಿಗಳ ಜೊತೆ ಕೆಪಿಡಿ ಸಭೆ ನಡೆಸಿದರು.