ಬಾಗಲಕೋಟೆ:ಜಿಲ್ಲೆಯ ಮಹಾಲಿಂಗಪುರ ನಗರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದೆ. ಬಿರುಗಾಳಿಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕದ ಮೇಲೆ ಹಳೆಯ ನೀಲಗಿರಿ ಮರಬಿದ್ದು 7 ಲಕ್ಷ ವೆಚ್ಚದ ಯಂತ್ರೋಪಕರಣ ಹಾಗೂ ಶೆಡ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಬಿರುಗಾಳಿ ಮಳೆಗೆ ಅಪಾರ ಹಾನಿ: ಅಧಿಕಾರಿಗಳ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಆಕ್ರೋಶ
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ನಗರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಮಾಜಿ ಸಚಿವೆ ಉಮಾಶ್ರೀ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿರುಗಾಳಿ ಮಳೆಗೆ ಅಪಾರ ಹಾನಿ..ಕ್ರಮಕೊಳ್ಳದ ಅಧಿಕಾರಿಗಳ ವಿರುದ್ಧ ಮಾಜಿ ಸಚಿವೆ ಉಮಾಶ್ರೀ ಆಕ್ರೋಶ
ಈ ಘಟಕದಲ್ಲಿ ಕಾರ್ಯ ನಿರ್ವಹಿಸುತಿದ್ದ ಮೂವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಘಟನೆಯಲ್ಲಿ ಜಾವೇದ್ ನದಾಫ ಉರ್ಫ್ ನಾಗರಾಳ ಎಂಬ ಬಾಲಕ ಗಾಯಗೊಂಡಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವೆ ಉಮಾಶ್ರೀ, ಇಷ್ಟಾದರೂ ಯಾವುದೇ ಕ್ರಮ ಕೈಗೊಳ್ಳದ ಸ್ಥಳೀಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು, ಆದಷ್ಟು ಬೇಗ ಶಿಥಿಲಗೊಂಡ ನೀರಿನ ಘಟಕ ತೆರವುಗೊಳಿಸುವುದಾಗಿ ತಿಳಿಸಿದರು.