ಬಾಗಲಕೋಟೆ:ರಾಜ್ಯದಲ್ಲಿ ಎಂದೂ ಕಂಡರಿಯದ ಪ್ರವಾಹ ಬಂದಿದ್ದು,ಕೇಂದ್ರ ಸರ್ಕಾರ ಈ ಕೂಡಲೇ ಐದು ಸಾವಿರ ಕೋಟಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಶಾಸಕ, ಕಾಂಗ್ರೆಸ್ ಮುಖಂಡರಾಗಿರುವ ಎಸ್. ಜಿ. ನಂಜಯ್ಯನಮಠ, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ ಒತ್ತಾಯಿಸಿದರು.
ಪ್ರವಾಹ ಪೀಡಿತ ಪ್ರದೇಶಕ್ಕೆ ಹೆಚ್ಚಿನ ಪರಿಹಾರಕ್ಕೆ ಪ್ರಧಾನಿಗೆ ಮನವಿ - ಬಾಗಲಕೋಟೆ ನ್ಯೂಸ್
ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪುನರ್ವಸತಿ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಕ್ಕೆ ಹೆಚ್ಚಿನ ಪರಿಹಾರಕ್ಕೆ ಪ್ರಧಾನಿಗೆ ಮನವಿ
ನಗರದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, 2009ರ ಪ್ರವಾಹದ ಸಮಯದಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ವೈಮಾನಿಕ ಸಮೀಕ್ಷೆ ನಡೆಸಿ 20 ಸಾವಿರ ಕೋಟಿ ಪರಿಹಾರ ಧನ ನೀಡಿದ್ದರು.
ಈಗಿನ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಲಿಲ್ಲ ಪರಿಹಾರ ಧನ ನೀಡುತ್ತಿಲ್ಲ. ಕೇವಲ ನೂರಾರು ಕೋಟಿ ನೀಡಿದರೆ, ಬಾಗಲಕೋಟೆ ಜಿಲ್ಲೆಗೇ ಪರಿಹಾರ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮೊದಲ ಹಂತವಾಗಿ ಐದು ಸಾವಿರ ಕೋಟಿ ನಂತರ 15 ಸಾವಿರ ಕೋಟಿ ಹಣವನ್ನು ನೀಡಬೇಕು ಎಂದು ಆಗ್ರಹಿಸಿದರು.