ಬಾಗಲಕೋಟೆ: ಮಲ್ಲಪ್ರಭಾ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಪರಿಹಾರ ತಂದು ಸಂಕಷ್ಟ ನಿವಾರಿಸಿ... ಮೊಸಳೆ ಕಣ್ಣೀರು ಬೇಡ ಎಂದು ಕಾಶಪ್ಪನವರ್ - ಪ್ರವಾಹ ಪೀಡಿತ ಪ್ರದೇಶ
ರಾಜ್ಯ ಸರ್ಕಾರ, ಕೇಂದ್ರದ ಮೇಲೆ ಒತ್ತಡ ಹೇರಿ ಆದಷ್ಟು ಬೇಗ ಪರಿಹಾರ ತಂದು ಸಂಕಷ್ಟಕ್ಕೀಡಾದ ಜನರಿಗೆ ಸಹಾಯ ಮಾಡಬೇಕಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.
ವಿಜಯಾನಂದ ಕಾಶಪ್ಪನವರ್
ಹುನಗುಂದ ತಾಲೂಕಿನ ಕೂಡಲಸಂಗಮ, ಗಂಜೀಹಾಳ್, ಚಿತ್ತರಗಿ, ಗಜಕಲ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆ ಆಲಿಸಿದರು.
ಇದೇ ವೇಳೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಪ್ರವಾಹದಿಂದ ಒಂದು ಲಕ್ಷ ಕೋಟಿ ರೂ. ಹಾನಿಯಾಗಿದೆ. ಅಷ್ಟೇ ಪ್ರಮಾಣದಲ್ಲಿ ಕೇಂದ್ರದಿಂದ ಪರಿಹಾರ ಧನ ಪಡೆದುಕೊಳ್ಳುವದು ಅಗತ್ಯವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪಕ್ಷವೇ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಸಾಕಷ್ಟು ಪ್ರಮಾಣದಲ್ಲಿ ಪರಿಹಾರ ತೆಗೆದುಕೊಂಡು ಬರಬೇಕಾಗಿದೆ. ಕೇವಲ ಮೊಸಳೆ ಕಣ್ಣೀರು ಹಾಕದೇ ಪರಿಹಾರ ನೀಡುವಲ್ಲಿ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.