ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕು ಬಲಿ - Bagalkote corona latest news

ಬಾಗಲಕೋಟೆಯಲ್ಲಿ ಕೊರೊನಾ ಸೋಂಕಿಗೆ ಇಂದು ನಾಲ್ಕು ಜನ ಮೃತಪಟ್ಟಿದ್ದಾರೆ.

ಕೋವಿಡ್ ಡೆತ್
ಕೋವಿಡ್ ಡೆತ್

By

Published : Aug 19, 2020, 9:34 PM IST

ಬಾಗಲಕೋಟೆ : ಜಿಲ್ಲೆಯಲ್ಲಿ ಕೋವಿಡ್-19ಗೆ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತಪಟ್ಟವರ ವಿವರ:

ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ನಿವಾಸಿ 67 ವರ್ಷದ ಮಹಿಳೆ ಆಗಸ್ಟ್ 7 ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಇಂದು ಮೃತಪಟ್ಟಿದ್ದಾರೆ.

ಜಮಖಂಡಿ ತಾಲೂಕಿನ ನಿವಾಸಿ 50 ವರ್ಷದ ಮಹಿಳೆ ಆಗಸ್ಟ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ಉಸಿರಾಟ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಇನ್ನು ಇದೇ ತಾಲೂಕಿನ ನಿವಾಸಿ 67 ವರ್ಷದ ವ್ಯಕ್ತಿ ಆಗಸ್ಟ್17 ರಂದು ಆಸ್ಪತ್ರೆಗೆ ದಾಖಲಾಗಿದ್ದು, ರಕ್ತದ ಒತ್ತಡದ ತೊಂದರೆಗೆ ಒಳಗಾಗಿ ಕೊನೆಯುಸಿರೆಳಿದ್ದಾರೆ.

ಮುಧೋಳನ ನಿವಾಸಿ 65 ವರ್ಷದ ವ್ಯಕ್ತಿ ಆಗಸ್ಟ್ 14 ರಂದು ಖಾಸಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿರುತ್ತಾರೆ.

ಮೃತದೇಹಗಳನ್ನು ಕೋವಿಡ್ ಮಾರ್ಗಸೂಚಿಯ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ತಿಳಿಸಿದ್ದಾರೆ.

ABOUT THE AUTHOR

...view details