ಬಾಗಲಕೋಟೆ: ಸರ್ಕಾರಿ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.
ಸರ್ಕಾರಿ ನೌಕರರ ಸಮಸ್ಯೆ ಇತ್ಯರ್ಥಕ್ಕೆ ಸಿಎಂ ಜೊತೆ ಚರ್ಚೆ: ಗೋವಿಂದ ಕಾರಜೋಳ - ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ
ಸರ್ಕಾರಿ ನೌಕರರು ಉತ್ತಮವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು. ನಗರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಗರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ನೌಕರರ ಬಗ್ಗೆ ನನಗೆ ಪ್ರೀತಿ ಹಾಗೂ ಗೌರವವಿದೆ. ನೌಕರರಿಗೆ ಕಾಲಕಾಲಕ್ಕೆ ಬಡ್ತಿ, ಸೌಲಭ್ಯಗಳು ದೊರಕಬೇಕು. ನೌಕರರು ಶ್ರದ್ಧೆಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ದೊರಕುವುದರ ಜೊತೆಗೆ ಸರ್ಕಾರಕ್ಕೂ ಒಳ್ಳೆಯ ಹೆಸರು ಬರಬೇಕು. ನೌಕರರ ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ನೌಕರರ ಬಗ್ಗೆ ಸಕಾರಾತ್ಮಕ ಮನೋಭಾವ ಹೊಂದಿದ್ದು, ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಶಾಸಕರಾದ ವೀರಣ್ಣ ಚರಂತಿಮಠ, ಸಿದ್ದು ಸವದಿ, ಸಂಸದರಾದ ಪಿ.ಸಿ.ಗದ್ದಿಗೌಡರ್ , ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಮತ್ತಿತರರು ಉಪಸ್ಥಿತರಿದ್ದರು.