ಕರ್ನಾಟಕ

karnataka

By

Published : Apr 7, 2020, 4:41 PM IST

ETV Bharat / state

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನ ಪಾಲಿಸಲು ಗೋವಿಂದ ಕಾರಜೋಳ ಮನವಿ

ಮುಧೋಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸಭೆ ನಡೆಸಿದರು.

Govindakarajola
ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನ ಪಾಲಿಸಲು ಗೋವಿಂದ ಕಾರಜೋಳ ಮನವಿ

ಬಾಗಲಕೋಟೆ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಅಧಿಕಾರಿಗಳು ಹಾಗೂ‌ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಪಾಲಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದರು.

ಮುಧೋಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ ನಡೆಸಿದ ಅವರು, ಕ್ವಾರಂಟೈನ್​ನಲ್ಲಿರುವವರು ಸ್ವಯಂ ನಿಯಮಗಳನ್ನು ರೂಪಿಸಿಕೊಂಡು ಸರ್ಕಾರದ ನಿಯಮಗಳನ್ನು ಅನುಸರಿಸಬೇಕು.

ತಮ್ಮ ಮತ್ತು ತಮ್ಮ ಕುಟುಂಬದ ಆರೋಗ್ಯದ ಜೊತೆಗೆ ಸಮಾಜದ ಆರೋಗ್ಯವನ್ನು‌ ಸಂರಕ್ಷಣೆ ಮಾಡಲು ಸಹಕರಿಸಬೇಕು. ಅಗತ್ಯ ಸೇವೆ ಇಲ್ಲದ ಸಮಯದಲ್ಲಿ ಯಾರೂ ಮನೆಯಿಂದ ಹೊರಗಡೆ ಬರಬಾರದು. ಯಾರೂ ಹಸಿವಿಂದ ಬಳಲದಂತೆ ಕ್ರಮಕೈಗೊಳ್ಳಬೇಕು. ಹೊರ ಜಿಲ್ಲೆಗಳಿಂದ ಬಂದಂತಹವರ ಮೇಲೂ ನಿಗಾವಹಿಸಬೇಕು. ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರ ಸಹಕಾರ‌ ಮುಖ್ಯ. ಅನಗತ್ಯವಾಗಿ ಮನೆಯಿಂದ‌ ಹೊರಗಡೆ ಬರಬಾರದು. ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದ‌ ಕೂಡಲೇ ವೈದ್ಯರಿಂದ ತಪಾಸಣೆ‌ ಮಾಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಸಭೆಯಲ್ಲಿ ತಾಲೂಕು‌ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details