ಬಾಗಲಕೋಟೆ:ಸರ್ಕಾರದ ಹತ್ತು ಹಲವು ಮಹತ್ವದ ಯೋಜನೆಗಳ ಅರಿವನ್ನು ಬೀದಿನಾಟಕ, ಜಾನಪದ ಸಂಗೀತ ಹಾಗೂ ವಿಚಾರ ಸಂಕಿರಣದ ಮೂಲಕ ಸಾರ್ವಜನಿಕರ ಮನೆ ಬಾಗಿಲಿಗೆ ಮುಟ್ಟಿಸುವ ನಿಟ್ಟಿನಲ್ಲಿ ವಾರ್ತಾ ಇಲಾಖೆಯಿಂದ ತಾಲೂಕಿನ ನೀಲಾ ನಗರದಲ್ಲಿ ಗುರುವಾರ ಗ್ರಾಮ ವಾಸ್ತವ್ಯ ಮಾಡಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಲಾನಗರ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಹಮ್ಮಿಕೊಂಡ ವಿನೂತನ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಜಿಪಂ ಸದಸ್ಯ ರಂಗನಗೌಡ ಗೌಡರ ಚಾಲನೆ ನೀಡಿದರು. ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಮೂಲಕ ಕಾರ್ಯಕ್ರಮ ಹಮ್ಮಿಕೊಂಡಿರುವುದನ್ನು ಶ್ಲಾಘಿಸಿದರು. ಅಲ್ಲದೇ ಸರ್ಕಾರದ ಯೋಜನೆಗಳ ಸದುಪಯೋಗಕ್ಕೆ ಕರೆ ನೀಡಿದರು.