ಬಾಗಲಕೋಟೆ: ಜಿಲ್ಲಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮನೆಗಳಿಗೆ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ.
ಬಾಗಲಕೋಟೆ ಜಿಲ್ಲಾದ್ಯಂತ ಭಾರೀ ಮಳೆ: ಮನೆ, ಜಮೀನುಗಳಿಗೆ ನುಗ್ಗಿದ ನೀರು
ಬಾಗಲಕೋಟೆ ಜಿಲ್ಲೆಯ ಬಾದಾಮಿ, ಹುನಗುಂದ ಹಾಗೂ ಇಳಕಲ್ಲ ತಾಲೂಕಿನಾದ್ಯಂತ ರಾತ್ರಿ ಇಡೀ ಸುರಿದ ಭಾರೀ ಮಳೆಯಿಂದಾಗಿ ಜಮೀನಿನಲ್ಲಿದ್ದ ಅಪಾರ ಪ್ರಮಾಣದ ಫಸಲು ನಾಶವಾಗಿದೆ.
ಬಾಗಲಕೋಟೆ ಜಿಲ್ಲಾದ್ಯಂತ ಭಾರೀ ಮಳೆ: ಮನೆ, ಜಮೀನುಗಳಿಗೆ ನುಗ್ಗಿದ ನೀರು..
ಬಾದಾಮಿ, ಹುನಗುಂದ ಹಾಗೂ ಇಳಕಲ್ಲ ತಾಲೂಕಿನಾದ್ಯಂತ ರಾತ್ರಿ ಇಡೀ ಸುರಿದ ಭಾರೀ ಮಳೆಯಿಂದಾಗಿ ಜಮೀನಿನಲ್ಲಿದ್ದ ಅಪಾರ ಪ್ರಮಾಣದ ಫಸಲು ನಾಶವಾಗಿದೆ. ಹುನಗುಂದ ಪಟ್ಟಣದ ಓಂ ಶಾಂತಿ ನಗರದಲ್ಲಿ ಹಳ್ಳ ತುಂಬಿ ಹರಿದ ಪರಿಣಾಮ ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿ ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಇಳಕಲ್ಲ ಪಟ್ಟಣದ ಪ್ರಮುಖ ಹಳ್ಳ ತುಂಬಿ ಹರಿಯುತ್ತಿದೆ. ಕಳೆದ ಹಲವು ವರ್ಷಗಳ ಹಿಂದೆ ಬತ್ತಿ ಹೋಗಿದ್ದ ಹಳ್ಳ ತುಂಬಿ ಹರಿಯುತ್ತಿದೆ.