ಬಾಗಲಕೋಟೆ:ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಬಾಗಲಕೋಟೆ ಜಿಲ್ಲಾದ್ಯಂತ ಭಾರೀ ಮಳೆ: ಕರಡಿ-ಇಳಕಲ್ ರಸ್ತೆ ಸಂಪರ್ಕ ಬಂದ್
ಬಾಗಲಕೋಟೆ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಹಳ್ಳ ತುಂಬಿ ರಸ್ತೆಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕರಡಿ-ಇಳಕಲ್ ರಸ್ತೆ ಸಂಪರ್ಕ ಬಂದ್ ಆಗಿದೆ.
ಬಾಗಲಕೋಟೆ ಜಿಲ್ಲಾದ್ಯಂತ ಭಾರೀ ಮಳೆ: ಕರಡಿ-ಇಳಕಲ್ ರಸ್ತೆ ಸಂಪರ್ಕ ಬಂದ್
ಹಳ್ಳ ತುಂಬಿ ರಸ್ತೆಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕರಡಿ-ಇಳಕಲ್ ರಸ್ತೆ ಸಂಪರ್ಕ ಬಂದ್ ಆಗಿದೆ. ಇದರಿಂದ ಕರಡಿ, ಬೂದಿಹಾಳ, ತಾರಿವಾಳ, ಜಂಬಲದಿನ್ನಿ ಸೇರಿ ಇತರೆ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಇನ್ನು ಬೇಕಮಲದಿನ್ನಿ ಗ್ರಾಮದಲ್ಲೂ ವರುಣಾರ್ಭಟಕ್ಕೆ ಜನರು ತತ್ತರಿಸಿದ್ದಾರೆ. ಗ್ರಾಮದ ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಅಲ್ಲದೇ ಜಮೀನುಗಳಿಗೂ ಕೂಡ ನೀರು ನುಗ್ಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ವಿವಿಧ ಪ್ರದೇಶದಲ್ಲಿ ಮನೆಗಳು ಜಖಂಗೊಂಡಿದ್ದು ಪರಿಹಾರ ನೀಡುವಂತೆ ಜನರು ಒತ್ತಾಯಿಸಿದ್ದಾರೆ.