ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಪರಿಣಾಮ ರಸ್ತೆಗಳು ಬಂದ್ ಆಗಿ ಜನರ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.
ಇಲಕಲ್ ತಾಲೂಕಿನಲ್ಲಿ ಹಳ್ಳಗಳು ಉಕ್ಕಿ ಹರಿಯುತ್ತಿರುವುದರಿಂದ ನಂದವಾಡಗಿ-ಕಂಬಳಿಹಾಳ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹಲವಡೆ ಹೊಲ, ಗದ್ದೆಗಳಿಗೆ ನೀರು ನುಗ್ಗಿದ್ದು, ರೈತರು ಕಂಗಾಲಾಗಿದ್ದಾರೆ. ಬಾಗಲಕೋಟೆ, ಬಾದಾಮಿ, ಹುನಗುಂದ ತಾಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.