ಬಾಗಲಕೋಟೆ: ಜಿಲ್ಲೆಯಲ್ಲಿ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರಿಸಿದ್ದು, ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಬಾದಾಮಿ ತಾಲೂಕಿನ ಕುಳಗೇರಿ ಗ್ರಾಮದ ಆಶ್ರಯ ಕಾಲೋನಿಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ರಾತ್ರಿಯಿಡೀ ನಿದ್ದೆಯಿಲ್ಲದೆ ಜಾಗರಣೆ ಮಾಡುವಂತಾಯಿತು.
ಕುಳಗೇರಿಯಲ್ಲಿ ನಿರಂತರ 2 ಗಂಟೆಗಳ ಕಾಲ ಮಳೆ ಸುರಿದ ಪರಿಣಾಮ ಆಹಾರ ಧಾನ್ಯ ಹಾಗೂ ಇತರ ವಸ್ತುಗಳು ನೀರು ಪಾಲಾಗಿವೆ. ಈ ಬಗ್ಗೆ ಇಲ್ಲಿನ ಜನರು ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ. ಮನೆಯೊಳಗೆ ನುಗ್ಗಿದ ನೀರನ್ನು ಹೊರಹಾಕಲು ಜನರು ಹರಸಾಹಸಪಟ್ಟರು.