ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಬಾಗಲಕೋಟೆಯಲ್ಲಿ ಭಾರೀ ಮಳೆ: ಸಂಕಷ್ಟಕ್ಕೆ ಸಿಲುಕಿದ ಜನ ಜೀವನ - Increased rainfall in Bagalkot
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಬಾಗಲಕೋಟೆಯಲ್ಲಿ ಮಿತಿ ಮೀರಿದ ಮಳೆ
ಕಳೆದ ಹಲವು ದಿನಗಳಿಂದ ನಗರದಲ್ಲಿ ಬಿಸಿಲಿನ ತಾಪ ಹೆಚ್ಚಾಗಿತ್ತು. ಶನಿವಾರ ರಾತ್ರಿ ಸುರಿದ ಮಳೆಗೆ ಬನಹಟ್ಟಿ ಪಟ್ಟಣದ ಗಲ್ಲಿಗಲ್ಲಿಗೆ ಮಳೆ ನೀರು ನುಗ್ಗಿರುವ ಪರಿಣಾಮ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಲ್ಲದೇ, ಲಕ್ಷ್ಮಿ ನಗರದ ಕೆಲವು ಮನೆಗಳ ಒಳಗೆ ನೀರು ನುಗ್ಗಿದ್ದರಿಂದ ಸರಕು, ಸಾಮಗ್ರಿಗಳು ಹಾಳಾಗಿದ್ದಲ್ಲದೆ, ಮಲಗಲು ಸಾಧ್ಯವಾಗದೆ ಜಾಗರಣೆ ಮಾಡಿದ ಜನರು ನೀರು ಹೊರಹಾಕಲು ಹರಸಾಹಸ ಪಟ್ಟಿದ್ದಾರೆ.