ಬಾಗಲಕೋಟೆ:ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನ ಕೊಡಲಿಯಿಂದ ತಲೆಗೆ ಹೊಡೆದು ಪತಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲುಕಿನ ತೋಳಮಟ್ಟಿ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಯಲ್ಲಪ್ಪ ಮಾದರ (24) ಎಂಬಾಕೆ ಹತ್ಯೆಗೀಡಾದಾಕೆ ಎಂದು ತಿಳಿದು ಬಂದಿದೆ.
ಪತ್ನಿಯ ಶೀಲ ಶಂಕಿಸಿ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ ಪಾಪಿ ಪತಿ - ಪತಿಯಿಂದ ಪತ್ನಿಯ ಹತ್ಯೆ
ಪತ್ನಿಯ ಶೀಲ ಶಂಕಿಸಿ ಆಕೆಯನ್ನ ಹತ್ಯೆ ಮಾಡಿದ ಪತಿ ನೇರವಾಗಿ ಪೊಲೀಸ್ ಠಾಣೆಗೆ ಆಗಮಿಸಿ ಶರಣಾಗಿದ್ದಾನೆ. ಕೊಡಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾನೆ.
ಪತ್ನಿಯ ಶೀಲ ಶಂಕಿಸಿ ಕೊಡಲಿಯಿಂದ ಹೊಡೆದು ಹತ್ಯೆಗೈದ ಪಾಪಿ ಪತಿ
ಪತ್ನಿಯ ಶೀಲ ಶಂಕಿಸಿದ್ದ ಪತಿ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆ ಮಾಡಿದ ಬಳಿಕ ಪತಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಬೀಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.