ಕರ್ನಾಟಕ

karnataka

ETV Bharat / state

ವಿಧಾನಸಭೆ ಚುನಾವಣೆ ವೇಳೆ ಹಾವು-ಮುಂಗುಸಿ... ಲೋಕ ಸಮರಕ್ಕೆ ಒಂದಾದ ಮುಖಂಡರು!

ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಬದ್ಧ ವೈರಿಗಳಾಗಿದ್ದ ನಾಯಕರು ಇಂದು ಮೈತ್ರಿ ಸರ್ಕಾರದ ಪ್ರತಿಫಲದಿಂದ ಮಿತ್ರರಾಗಿ ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಮೈತ್ರಿ ಪತ್ರಿಕಾಗೋಷ್ಠಿ

By

Published : Mar 30, 2019, 5:45 PM IST

ಬಾಗಲಕೋಟೆ:ವಿಧಾನಸಭೆ ಚುನಾವಣೆಯಲ್ಲಿ ಹಾವು, ಮುಂಗಸಿಯಾಗಿದ್ದ ವಿಜಯಾನಂದ ಕಾಶಪ್ಪನವರ ಮತ್ತು ಎಸ್.ಆರ್.ನವಲಿ ಹೀರೆಮಠ ಸದ್ಯ ಮೈತ್ರಿ ಸರ್ಕಾರದ ಆಡಳಿತದಲ್ಲಿ ಮಿತ್ರರಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರ ಮೈತ್ರಿ ಅಭ್ಯರ್ಥಿಯಾಗಿದ್ದು ಈ ಬೆಳವಣಿಗೆಗೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ವಿಜಯಾನಂದಗೆ ಎಸ್.ಆರ್.ನವಲಿ ಹೀರೆಮಠ ಸವಾಲ್ ಎಸೆದಿದ್ದರು. ಸದ್ಯ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯಾನಂದಗೆ ಜೆಡಿಎಸ್ ಸಹಕಾರ ಅನಿವಾರ್ಯ ಮತ್ತು ಗೆಲವಿನ ತಂತ್ರ ರೂಪಿಸಲು ನವಲಿ ಹೀರೆಮಠ ಸಹಕಾರ ಅಗತ್ಯವಿದೆ.

ಮೈತ್ರಿ ಪಕ್ಷದ ಪತ್ರಿಕಾಗೋಷ್ಠಿ

ಸದ್ಯ ಶತ್ರುಗಳು ಮಿತ್ರರಾಗಿ ಒಂದೇ ವೇದಿಕೆ ಹಂಚಿಕೊಂಡು ಜಂಟಿ ಪ್ರತಿಕಾಗೋಷ್ಠಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ವಿಧಾನಸಭೆ ಚುನಾವಣೆ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆ. ನಮ್ಮ ಮುಖಂಡರ ಮಾರ್ಗದರ್ಶನ ಹಾಗೂ ಸಲಹೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಒಗ್ಗಟಾಗಿ ಚುನಾವಣೆ ಮಾಡುತ್ತಿದ್ದೇವೆ. ಈ ಹಿಂದೆ ನಡೆದ ಘಟನೆಗಳನ್ನು ಮರೆತು ಕಾಂಗ್ರೆಸ್ ಪಕ್ಷದ ಗೆಲವಿಗೆ ಶ್ರಮಿಸುತ್ತಿರುವುದಾಗಿ ತಿಳಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಎಸ್.ಆರ್.ನವಲಿ ಹೀರೆಮಠ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರ ಮಾರ್ಗದರ್ಶನದಲ್ಲಿ ನಾವು ನಡೆಯುತ್ತಿದ್ದು, ಸಮ್ಮಿಶ್ರ ಸರ್ಕಾರ ರಚನೆ ಆದ ನಂತರ ಲೋಕಸಭಾ ಚುನಾವಣೆಗೆ ಜಂಟಿಯಾಗಿ ಕೆಲಸ ಮಾಡಲಾಗುತ್ತಿದೆ. ಈ ಹಿನ್ನೆಲೆ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ - ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ ಅವರನ್ನು ಆಯ್ಕೆ ಮಾಡಲಾಗಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದರು.

ABOUT THE AUTHOR

...view details