ಕರ್ನಾಟಕ

karnataka

ETV Bharat / state

ನಾನು ಸಿಎಂ ಆಗಿದ್ರೆ ನೆರೆ ಪರಿಹಾರಕ್ಕಾಗಿ ಮೋದಿ ಮನೆ ಮುಂದೆ ಪ್ರತಿಭಟನೆ ಮಾಡ್ತಿದ್ದೆ: ಸಿದ್ದರಾಮಯ್ಯ - siddaramaiah visit to badami govanakoppa village

ರಾಜ್ಯದಲ್ಲಿ ನಾನೇನಾದರೂ ಈಗ ಮುಖ್ಯಮಂತ್ರಿಯಾಗಿದ್ದರೆ ನೆರೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಮುಂದೆ ಪ್ರತಿಭಟನೆ ಕೂರುತ್ತಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, bagalakote ex cm siddaramaiah news
ಬಾಗಲಕೋಟೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

By

Published : Jan 9, 2020, 8:05 PM IST

ಬಾಗಲಕೋಟೆ:ನಾನೇನಾದರೂ ಈಗ ಮುಖ್ಯಮಂತ್ರಿಯಾಗಿದ್ದರೆ ನೆರೆ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಮುಂದೆ ಪ್ರತಿಭಟನೆ ಕೂರುತ್ತಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿಯ ಗೋವನಕೊಪ್ಪ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, 25 ಸಂಸದರನ್ನು ಆಯ್ಕೆ ಮಾಡಿ ಕಳಿಸಿದರೂ, ನೆರೆ ಪರಿಹಾರ ಧನ ನೀಡಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದರೆ, ಪ್ರಧಾನಿ ಮನೆಯ ಮುಂದೆ ಕುಳಿತುಕೊಂಡು ಪರಿಹಾರ ನೀಡುವಂತೆ ಪ್ರತಿಭಟನೆ ಮಾಡುತ್ತಿದ್ದೆ ಎಂದರು.

ಯಡಿಯೂರಪ್ಪ ಸರ್ಕಾರದ ಬಂದು ಇದೇ 26ಕ್ಕೆ ಆರು ತಿಂಗಳು ಆಗುತ್ತೆ, ಇಷ್ಟು ದಿನ ಬಾಯಿ ಮುಚ್ಚಿ ಕುಳಿತುಕೊಂಡಿದ್ದೆವು. ಇನ್ನು ಮುಂದೆ ಪರಿಹಾರಧನ ಸೇರಿದಂತೆ ಇತರ ಸೌಲಭ್ಯಕ್ಕಾಗಿ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದೇ ಸಮಯದಲ್ಲಿ ಶಾಲಾ ಮಕ್ಕಳೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗಳನ್ನು ಆಲಿಸಿದರು.

ABOUT THE AUTHOR

...view details