ಕರ್ನಾಟಕ

karnataka

ETV Bharat / state

ಸುಳ್ಳು ಆರೋಪ ಮಾಡಿದ್ರೆ ಮಾನನಷ್ಟ ಮೊಕದ್ದಮೆ : ಕಾಶಪ್ಪನವರ್​ಗೆ ದೊಡ್ಡನಗೌಡ ಪಾಟೀಲ ಎಚ್ಚರಿಕೆ - mla dhoddana Gowda Patil news

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​ ವಿನಾಕಾರಣ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗೆ ಪದೇ ಪದೆ ಸುಳ್ಳು ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಹುನಗುಂದ ಮತಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ ಎಚ್ಚರಿಕೆ ರವಾನಿಸಿದ್ದಾರೆ.

bagalkot
ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

By

Published : Dec 20, 2020, 11:15 AM IST

Updated : Dec 20, 2020, 11:38 AM IST

ಬಾಗಲಕೋಟೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್​ ಪೊಲೀಸ್ ಠಾಣೆಗೆ ತಾವೇ ಹೋಗಿ ಗಲಾಟೆ ಮಾಡಿದ್ದು, ವಿನಾಕಾರಣ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಹೀಗೆ ಪದೇ ಪದೆ ಸುಳ್ಳು ಆರೋಪ ಮಾಡಿದರೆ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ಹುನಗುಂದ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಹುನಗುಂದ ಮತಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

ನಗರದಲ್ಲಿ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ವಿಜಯಾನಂದ ಕಾಶಪ್ಪನವರ್​ ಪೊಲೀಸ್ ಠಾಣೆಗೆ ಹೋಗಿ ಗದ್ದಲ ಮಾಡಲು‌ ನಾನು ಹೇಳಿದ್ದೇನಾ? ಎಂದು ಪ್ರಶ್ನಿಸಿದರು. ಕಾನೂನು ಪ್ರಕಾರ ಎಲ್ಲರೂ ಒಂದೇ. ಯಾರೇ ತಪ್ಪು ಮಾಡಿದರು ಅವರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಪೊಲೀಸರಿಗೆ ಧಮ್ಕಿ ಹಾಕಿರುವ ವಿಡಿಯೋ ವೈರಲ್; ಮಾಜಿ ಶಾಸಕನ ವಿರುದ್ಧ ಎಫ್​ಐಆರ್​

ಮಾಜಿ ಶಾಸಕರು ಪೊಲೀಸ್ ಠಾಣೆಗೆ ಹೋಗಿ ಆವಾಜ್ ಹಾಕಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಶಿಕ್ಷೆ ನೀಡಬೇಕು ಎಂದು ಶಾಸಕ ಪಾಟೀಲ್​ ಹೇಳಿದ್ರು.

Last Updated : Dec 20, 2020, 11:38 AM IST

ABOUT THE AUTHOR

...view details