ಬಾಗಲಕೋಟೆ: ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಾಗಲಕೋಟೆ ಜಿಲ್ಲೆಯ ರಬಕವಿ - ಬನಹಟ್ಟಿ ತಾಲೂಕಿನ ಬನಹಟ್ಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ: 5 ಬೈಕ್ ವಶಕ್ಕೆ
ಬಾಗಲಕೋಟೆಯ ರಬಕವಿ - ಬನಹಟ್ಟಿ ತಾಲೂಕಿನ ಬನಹಟ್ಟಿ ಪೊಲೀಸರು ಐವರು ಬೈಕ್ ಕಳ್ಳರನ್ನು ಬಂಧಿಸಿದ್ದಾರೆ.
ಬಂಧಿತರಿಂದ 1.1 ಲಕ್ಷ ರೂ. ಮೌಲ್ಯದ 5 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಬಕವಿ-ಬನಹಟ್ಟಿ ತಾಲೂಕಿನ ಹನಗಂಡಿ ಗ್ರಾಮದ ತನವೀರ್ ರಮಜಾನ್‌ಸಾಬ್ ಲಾಡಖಾನ್(21) ಹಾಗೂ ಬನಹಟ್ಟಿಯ ಅಶೋಕ ಕಾಲನಿಯ ರಮಜಾನ್ ಇಸ್ಮಾಯಿಲ್ ಸಾಬ ನದಾಫ್(29) ಎಂದು ಗುರುತಿಸಲಾಗಿದೆ. ಬೈಕ್ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ನಕಲಿ ಕೀ ಬಳಸಿ ,ವಿಶೇಷವಾಗಿ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್‌ಗಳನ್ನೇ ಹೆಚ್ಚಾಗಿ ಕಳ್ಳತನ ಮಾಡಿದ್ದಾರೆಂದು ತಿಳಿದು ಬಂದಿದೆ.
ಜಮಖಂಡಿ ಡಿವೈಎಸ್ಪಿ ಪಾಂಡುರಂಗಯ್ಯ ಹಾಗು ಬನಹಟ್ಟಿ ವೃತ್ತ ನಿರೀಕ್ಷಕ ಜೆ. ಕರುಣೇಶಗೌಡ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ರವಿಕುಮಾರ ಧರ್ಮಟ್ಟಿ, ಎಎಸ್‌ಐ ಎಸ್.ಎಸ್. ಬಾಬಾನಗರ, ವಿ.ಎಸ್. ಅಜ್ಜನಗೌಡರ, ಎ.ಎಂ. ಜಮಖಂಡಿ, ನಿಂಗಪ್ಪ ಸಂತಿವೂರ, ಡಿ.ವಾಯ್. ಗುರಿಕಾರ, ಬಿ.ವಿ. ಕದಂ, ಎಂ.ಡಿ. ಸವದಿ, ಮಹೇಶ ಹಂಗಂಡಿ ಸೇರಿದಂತೆ ಅನೇಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.