ಕರ್ನಾಟಕ

karnataka

ETV Bharat / state

ದಿಶಾ ಪ್ರಗತಿ ಪರಿಶೀಲನಾ ಸಭೆಗೆ ಗೈರಾದವರಿಗೆ ನೋಟಿಸ್ ಕೊಡಿ.. ಡಿಸಿಗೆ ಸಂಸದ ಗದ್ದಿಗೌಡರ ಸೂಚನೆ - ದಿಶಾ ಪ್ರಗತಿ ಪರಿಶೀಲನಾ ಸಭೆ

ಶೌಚಾಲಯ, ಮನೆ, ಕುಡಿಯುವ ನೀರು, ಸ್ವಚ್ಛತೆಯ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಉದ್ಯೋಗ ಖಾತರಿ ಮೂಲಕ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವ ಕೆಲಸವಾಗಬೇಕು..

Issue notice to those who absent for at progress review meeting
ದಿಶಾ ಪ್ರಗತಿ ಪರಿಶೀಲನಾ ಸಭೆ

By

Published : Jul 28, 2020, 9:12 PM IST

ಬಾಗಲಕೋಟೆ :ಅನುಮತಿ ಪಡೆಯದೇ ಸಭೆಗೆ ಗೈರು ಹಾಜರಾದ ಜಮಖಂಡಿ ಮತ್ತು ಮುಧೋಳ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸಂಸದ ಪಿ ಸಿ ಗದ್ದಿಗೌಡರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿರುವ ನೂತನ ಆಡಿಟೋರಿಯಂ ಹಾಲ್‍ನಲ್ಲಿಂದು ಜರುಗಿದ ಮೊದಲ ತ್ರೈಮಾಸಿಕ ದಿಶಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಪುರಸ್ಕೃತ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಅನುಷ್ಠಾನಗೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ನೆಪ ಹೇಳದೇ ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಿದರು. ಶೌಚಾಲಯ, ಮನೆ, ಕುಡಿಯುವ ನೀರು, ಸ್ವಚ್ಛತೆಯ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಉದ್ಯೋಗ ಖಾತರಿ ಮೂಲಕ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವ ಕೆಲಸವಾಗಬೇಕು ಎಂದರು.

ಜಿಲ್ಲೆಯಲ್ಲಿ 42 ಲಕ್ಷ ಮಾನವ ದಿನಗಳ ಗುರಿ ಇದ್ದು, ಈ ಪೈಕಿ ಜುಲೈ ಅಂತ್ಯಕ್ಕೆ 1567361 ಮಾನವ ದಿನಗಳ ಸೃಜಿಸಲಾಗಿದೆ. ಸಾಮಾಜಿಕ ಅರಣ್ಯ, ಪ್ರಾದೇಶಿಕ ಅರಣ್ಯ, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಿಆರ್‍ಇಡಿಯಿಂದ 15.90 ಲಕ್ಷ ಮಾನ ದಿನಗಳನ್ನು ಸೃಜಿಸಲಾಗಿದೆ. ಈ ಪೈಕಿ 621478 ಪಿಡಿ ಜನರೇಷನ್ ಮಾಡಲಾಗಿದೆ. ಕೋವಿಡ್ ಹಿನ್ನೆಲೆ ಬಾಗಲಕೋಟೆ ತಾಲೂಕಿನಿಂದ ವಲಸೆ ಹೋಗಿದ್ದ ಕಾರ್ಮಿಕರು ಮರಳಿ ಬಂದಿದ್ದಾರೆ. ಅವರಿಗೆ ಕೆಲಸ ನೀಡಲಾಗುತ್ತಿದೆ. ನೀಲಾನಗರಕ್ಕೆ 700 ವಲಸೆ ಕಾರ್ಮಿಕರು ಇದ್ದು, ಅವರೆಲ್ಲರಿಗೂ ಕೆಲಸ ನೀಡಲಾಗಿದೆ ಎಂದು ತಾಪಂ ಇಒ ಬಸರಿಗಿಡದ ಸಭೆಗೆ ತಿಳಿಸಿದರು.

ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಬಾಕಿ ಉಳಿದಿರುವ ಅನುಷ್ಠಾನ ಪೂರ್ಣಗೊಳಿಸುವ ಕೆಲಸವಾಗಬೇಕು. ಕಮತಗಿಯಲ್ಲಿ 200 ಶೌಚಾಲಯಗಳು ನಿರ್ಮಾಣವಾಗಿವೆ. ಹಣ ಬಿಡುಗಡೆಯಾಗಿರದ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದಾಗ ತುರ್ತಾಗಿ ಬಿಲ್ ಪಾವತಿಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಗುಡ್ಡಗಳಲ್ಲಿ ಮಣ್ಣು ಮತ್ತು ತೇವಾಂಶ ರಕ್ಷಣೆಗೆ ಹೆಚ್ಚೆಚ್ಚು ಮ್ಯಾಂಡೇಷನ್ ಮಾಡಲು ತಿಳಿಸಿದರು.

ABOUT THE AUTHOR

...view details