ಬಾಗಲಕೋಟೆ:ನಾಳೆ ಜನವರಿ 12 ರಂದು ಜನ ಸೇವಕ ಸಮಾವೇಶ ಹಮ್ಮಿಕೊಂಡಿದ್ದು, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಚಿವರಾದ ವಿ. ಸೋಮಣ್ಣ, ರಮೇಶ ಜಾರಕಿಹೊಳಿ ಹಾಗೂ ಶ್ರೀಮತಿ ತೇಜಸ್ವಿನಿ ಅನಂತಕುಮಾರ ಸೇರಿದಂತೆ ಇತರ ಮುಖಂಡರು ಭಾಗವಹಿಸಲಿದ್ದಾರೆ ಎಂದು ಶಾಸಕ ವೀರಣ್ಣ ಚರಂತಿಮಠ ತಿಳಿಸಿದ್ದಾರೆ.
ಬಾಗಲಕೋಟೆಯ ವನಗರದ ಪ್ರೆಸ್ ಕಬ್ಲ್ ದಲ್ಲಿ 'ಜನ ಸೇವಕ ಸಮಾವೇಶ' ಸಂಬಂಧ ಸುದ್ದಿಗೋಷ್ಟಿ ಅವರು ನವನಗರದ ಪ್ರೆಸ್ ಕಬ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಇತ್ತೀಚಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತರು ಸಾಕಷ್ಟು ಸಂಖ್ಯೆಯಲ್ಲಿ ಸದಸ್ಯರು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಆಗುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ಸಮಯದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಎಸ್.ಟಿ. ಪಾಟೀಲ ಮಾತನಾಡಿ, ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಒಟ್ಟು 86,183 ಸದಸ್ಯರುಗಳ ಪೈಕಿ ಬಿಜೆಪಿ ಪಕ್ಷದ ಬೆಂಬಲಿತರು 45,266 ಸದಸ್ಯರು ಆಯ್ಕೆ ಆಗಿದ್ದಾರೆ. ರಾಜ್ಯದ 5,670 ಗ್ರಾಮ ಪಂಚಾಯತ್ಗಳ ಪೈಕಿ 3142 ಗ್ರಾಮ ಪಂಚಾಯತ್ ಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆ ಆಗಿದ್ದಾರೆ. ಇನ್ನೂ ಬಾಗಲಕೋಟೆ 195 ಗ್ರಾಮ ಪಂಚಾಯತ್ ಗಳಲ್ಲಿ 193 ಗ್ರಾಮ ಪಂಚಾಯತಿಗೆ ಚುನಾವಣೆ ನಡೆದಿದ್ದು, ಇದರಲ್ಲಿ 112 ಗ್ರಾಮ ಪಂಚಾಯತ್ಗೆ ಬಿಜೆಪಿ ಪಕ್ಷದ ಬೆಂಬಲಿತರು ಜಯಗಳಿಸುವ ಮೂಲಕ ಅಧಿಕಾರ ಹಿಡಿಯಲಿದ್ದಾರೆ ಎಂದರು.
ಇದೇ ಸಮಯದಲ್ಲಿ ಮಾತನಾಡಿದ ಅವರು, ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಸಿದ್ದತೆ ಅಂಗವಾಗಿ ನಾಳೆ ಸೇವಕ ಸಮಾವೇಶ ಹಮ್ಮಿಕೊಂಡಿದ್ದು, ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.