ಬಾಗಲಕೋಟೆ: ರಾಜ್ಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವರ್ಷಾಚರಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಪಂಚಮಸಾಲಿ ಪೀಠದ ಜಗದ್ಗುರು ಜಯ ಬಸವ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
'ಪಂಚಮಸಾಲಿ ಮೀಸಲಾತಿ ಹೋರಾಟದ ವರ್ಷಾಚರಣೆ ಕಾರ್ಯಕ್ರಮ ಮುಂದೂಡಿಕೆ' - Jaya mrityunjaya swamiji press meet in Bagalkot
ಈ ಕಾರ್ಯಕ್ರಮದಲ್ಲಿ ಅಂದಾಜು ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇತ್ತು. ಈ ಹಿನ್ನೆಲೆಯಲ್ಲಿ ಸಮಾಜದವರಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಸಮಾವೇಶ ಮುಂದಕ್ಕೆ ಹಾಕಲಾಗಿದೆ ಎಂದು ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕೂಡಲಸಂಗಮದಲ್ಲಿ ಆಯೋಜನೆಯಾಗಬೇಕಿದ್ದ ವರ್ಷಾಚರಣೆ ಕಾರ್ಯಕ್ರಮ ಹಾಗೂ ಕೃಷಿ ಬಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ. ಈ ಬಗ್ಗೆ ಚರ್ಚೆ ಮಾಡಲು ಖಾಸಗಿ ಹೋಟೆಲ್ನಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರ ಜೊತೆಗೆ ಸಭೆ ನಡೆಸಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಅಂದಾಜು ಒಂದು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇತ್ತು. ಈ ಹಿನ್ನೆಲೆಯಲ್ಲಿ ಸಮಾಜದವರಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಸಮಾವೇಶ ಮುಂದಕ್ಕೆ ಹಾಕಲಾಗಿದೆ. ಸರ್ಕಾರ ಸಹ ಪುಣ್ಯಸ್ಥಾನ ಸೇರಿದಂತೆ ಕೂಡಲಸಂಗಮದಲ್ಲಿ ಪೂಜೆ- ಪುನಸ್ಕಾರ ಮಾಡಲು ನಿಷೇಧ ಹೇರಿದೆ. ಹೀಗಾಗಿ, ನಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಕೋವಿಡ್ ಸಡಿಲಗೊಂಡ ಬಳಿಕ ಮತ್ತೆ ಮೀಸಲಾತಿ ಹೋರಾಟ ಮತ್ತು ಕಾರ್ಯಕ್ರಮ ಆಯೋಜಿಸಲು ನಿರ್ಧಾರ ಮಾಡಲಾಗಿದೆ ಎಂದರು.